ರಾಷ್ಟ್ರೀಯ

ಕುದುರೆ ವ್ಯಾಪರಕ್ಕೆ ಅವಕಾಶ ನೀಡದಿರಲು ಕೂಡಲೇ ಅಧಿವೇಶನ ಕರೆಯಿರಿ: ರಾಜ್ಯಪಾಲರಿಗೆ ಸಂತೋಷ್ ಹೆಗಡೆ ಸಲಹೆ

Pinterest LinkedIn Tumblr

ಹೈದರಾಬಾದ್: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕೂಡಲೇ ವಿಧಾನಸಭೆ ಅಧಿವೇಶನ ಕರೆದು ರಾಜಕೀಯ ಪಕ್ಷಗಳಿಗೆ ಬಹುಮತ ಸಾಬೀತುಪಡಿಸಲು ಸೂಚಿಸಬೇಕು. ವಿಳಂಬ ಮಾಡಿದರೆ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಬುಧವಾರ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಂದಿಲ್ಲ. ಆದರೂ ವಾಮ ಮಾರ್ಗದ ಮೂಲಕ ಸರ್ಕಾರ ರಚಿಸಲು ರಾಜಕೀಯ ಪಕ್ಷಗಳು ಸರ್ಕಸ್ ನಡೆಸುತ್ತಿರುವುದು ಸರಿಯಲ್ಲ ಎಂದು ಸಂತೋಷ್ ಹೆಗಡೆ ಅವರು ಪಿಟಿಐಗೆ ತಿಳಿಸಿದ್ದಾರೆ.

ರಾಜ್ಯಪಾಲರು ಕೂಡಲೇ ಅಧಿವೇಶನ ಕರೆದು ಬಹುಮತ ಸಾಬೀತಿಗೆ ಸೂಚಿಸಬೇಕು ಎಂದು ಮಾಜಿ ಲೋಕಾಯುಕ್ತರು ಹೇಳಿದ್ದಾರೆ.

ರಾಜ್ಯದಲ್ಲೂ ಗೋವಾ ಮತ್ತು ಮಣಿಪುರದಲ್ಲಿ ಆದಂತೆ ಆಗಬಾರದು. ಬಹುಮತ ಹೊಂದಿರುವ ರಾಜಕೀಯ ಪಕ್ಷ ಅಥವಾ ಪಕ್ಷಗಳ ಗುಂಪಿಗೆ ಮೊದಲು ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

Comments are closed.