7
ಬೆಂಗಳೂರು: ಅಧಿಕಾರ ಹಿಡಿಯಲು ಬಿಜೆಪಿ ಆಪರೇಷನ್ ಕಮಲಕ್ಕೆ ಕೈಹಾಕಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ಆಪರೇಷನ್ ಮಾಡಲು ಮುಂದಾಗಿದೆ. ಖುದ್ದು ಸೋನಿಯಾ ಗಾಂಧಿ ಅವರಿಂದಲೇ ರಾಜ್ಯ ಕಾಂಗ್ರೆಸ್ ನಾಯಕರಿಗೆ ಆದೇಶ ಬಂದಿದೆ ಎಂದು ಹೇಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಡಿ.ಕೆ ಶಿವಕುಮಾರ್ ಅವರಿಗೆ ಸೋನಿಯಾ ಗಾಂಧಿ ಅವರು ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ ವಿರುದ್ಧ ಆಪರೇಷನ್ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ನೀವೂ ಕೂಡ ಆಪರೇಷನ್ ನಡೆಸಬೇಕು. ಕಾಂಗ್ರೆಸ್ಗೆ ಬಂದರೆ ಸಚಿವ ಸ್ಥಾನ ನೀಡಲಾಗುವುದು ಎಂದು ಮನವೊಲಿಸಬೇಕು ಎಂದು ಆದೇಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Comments are closed.