ರಾಷ್ಟ್ರೀಯ

ದೇಶದ ಎಲ್ಲ ಸಂಸ್ಥೆಗಳ ಮೇಲೆ ಆರ್‌ಎಸ್‌ಎಸ್‌ ಹಿಡಿತ ಸಾಧಿಸುತ್ತಿದೆ: ರಾಹುಲ್ ಗಾಂಧಿ

Pinterest LinkedIn Tumblr

ನವದೆಹಲಿ: ಬಹುಮತವಿಲ್ಲದಿದ್ದರೂ ಬಿ.ಎಸ್‌.ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇವತ್ತು ಬೆಳಿಗ್ಗೆ ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸೋಲಿಗಾಗಿ ದೇಶ ಶೋಕಿಸುತ್ತಿತ್ತು ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜತೆಗೆ, ಛತ್ತೀಸ್‌ಗಡದ ರಾಯಪುರದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಸಂಸ್ಥೆಗಳ ಮೇಲೆ ಆರ್‌ಎಸ್‌ಎಸ್‌ ಹಿಡಿತ ಸಾಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

Comments are closed.