ರಾಷ್ಟ್ರೀಯ

ಪ್ರಧಾನಿ ಮೋದಿ ಎರಡು ದಿನಗಳ ಕಾಶ್ಮೀರ ಭೇಟಿ, ಕಣಿವೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ

Pinterest LinkedIn Tumblr

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಶ್ರೀನಗರ ಮತ್ತು ಜಮ್ಮುವಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಒಳ ಬರುವ ಮತ್ತು ಹೊರ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ತೀವ್ರ ತಾಪಸಣೆ ನಡೆಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತೀಯ ಸೇನೆ ಬಾಹ್ಯ ಭದ್ರತೆಯನ್ನು ಒದಗಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ನಾಳೆ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ 330 ಮೇಗಾ ವ್ಯಾಟ್ ಸಾಮರ್ಥ್ಯದ ಕಿಶೆಂಗಾಂಗಾ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

Comments are closed.