ರಾಷ್ಟ್ರೀಯ

ತಂಗಿಯನ್ನು ಕೊಲ್ಲುವುದಾಗಿ ಬೆದರಿಸಿ ಅಕ್ಕನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ!

Pinterest LinkedIn Tumblr


ಕಲ್ಯಾಣ: ತಂಗಿಯನ್ನು ಕೊಲ್ಲುವುದಾಗಿ ಬೆದರಿಸಿ ಅಕ್ಕನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ ಹೇಯ ಕೃತ್ಯ ಮಹಾರಾಷ್ಟ್ರದ ಕಲ್ಯಾಣದಲ್ಲಿ ನಡೆದಿದೆ.

ಬಲಿಪಶು ಬಾಲಕಿ ಅಪ್ರಾಪ್ತಳಾಗಿದ್ದು ದೊಂಬಿವಲಿಯ ಪ್ರೌಢಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದಾಳೆ. ನೆರೆಮನೆ ನಿವಾಸಿಯಾಗಿರುವ 25 ವರ್ಷದ ವಾಚ್‌ಮನ್ ಆಕೆಯ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ ಈ ಕೃತ್ಯ ನಡೆದಿದ್ದು, ತಂಗಿಗೇನಾದರೂ ಮಾಡಬಹುದೆಂಬ ಭಯದಿಂದ ಬಾಲಕಿ ಯಾರ ಬಳಿಯೂ ಈ ವಿಷಯವನ್ನು ಹೇಳಿಕೊಂಡಿಲ್ಲ. ಬುಧವಾರವಷ್ಟೇ ಬಾಲಕಿ ನಡೆದ ಸಂಗತಿಯನ್ನು ಪೋಷಕರಿಗೆ ತಿಳಿಸಿದ್ದಾಳೆ. ತಕ್ಷಣ ಆಕೆಯ ಪೋಷಕರು ತಿಲಕ್ ನಗರ್ ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಸೋಮವಾರ ರಾತ್ರಿ 9.30ಕ್ಕೆ ಬಾಲಕಿ ಮೆಡಿಕಲ್ ಸ್ಟೋರ್‌ಗೆ ಹೋಗುತ್ತಿದ್ದಾಗ ಹಿಂಬಾಲಿಸಿದ ಆರೋಪಿ ಲೋಕರಾಜ್ ಥಾಪಾ ಆಕೆಯ ಮೂಗಿಗೆ ಮತ್ತು ಬರಿಸುವ ವಸ್ತುವನ್ನು ಹಿಡಿದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ತನ್ನಿಬ್ಬರು ಸ್ನೇಹಿತರೊಂದಿಗೆ ಸೇರಿ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಬಳಿಕ ಇಬ್ಬರು ಸ್ನೇಹಿತರು ಅಲ್ಲಿಂದ ತೆರಳಿದ್ದು ಥಾಪಾ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯ ಆರೋಪಿ ಲೋಕರಾಜ್ ಥಾಪಾ ಮತ್ತವನ ಇಬ್ಬರು ಸ್ನೇಹಿತರಿಗಾಗಿ ತಿಲಕ್ ನಗರ ಪೊಲೀಸರು ಶೋಧ ನಡೆಸಿದ್ದಾರೆ.

Comments are closed.