ರಾಷ್ಟ್ರೀಯ

ಹಂಗಾಮಿ ಸ್ಪೀಕರ್ ಆಯ್ಕೆ ವಿರುದ್ಧದ ಕಾಂಗ್ರೆಸ್-ಜೆಡಿಎಸ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್; ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ಮುಂದುವರಿಕೆ

Pinterest LinkedIn Tumblr

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೆ.ಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್​ ಆಗಿ ಮುಂದುವರೆಯಲಿದ್ದಾರೆ. ಹೀಗಾಗಿ ಇಂದಿನ ಬಹುಮತ ಸಾಬೀತು ಪ್ರಕ್ರಿಯೆ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ.

ಅಂತೆಯೇ ಇಂದಿನ ಬಹುಮತ ಸಾಬೀತು ಪ್ರಕ್ರಿಯೆಯನ್ನು ಎಲ್ಲ ಚಾನೆಲ್​ಗಳಲ್ಲಿ ನೇರಪ್ರಸಾರ ಮಾಡಲು ಸೂಚಿಸಿದ್ದು, ಪಾರದರ್ಶಕತೆ ಕಾಯ್ದುಕೊಳ್ಳಲು ನೇರ ಪ್ರಸಾರವೊಂದೇ ಪರಿಹಾರ ಎಂದೂ ಹೇಳಿದೆ.

Comments are closed.