ರಾಷ್ಟ್ರೀಯ

ಸ್ಟೆರ್ ಲೈಟ್ ಕಂಪನಿ ವಿರುದ್ಧ ರೈತರು ಬೃಹತ್ ಪ್ರತಿಭಟನೆ; ಪೊಲೀಸ್ ಗೋಲಿಬಾರ್ ಗೆ 9 ರೈತರು ಬಲಿ

Pinterest LinkedIn Tumblr


ಚೆನ್ನೈ: ಸ್ಟೆರ್ ಲೈಟ್ ಕಂಪನಿ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ತಡೆಯಲು ಯತ್ನಿಸಿದ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಪರಿಸ್ಥಿತಿ ನಿಯಂತ್ರಣ ಮೀರಿದ ನಿಟ್ಟಿನಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ಗೆ 9 ರೈತರು ಬಲಿಯಾಗಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ.

ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದರು. ಆದರೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಪೊಲೀಸರು ಗುಂಪನ್ನು ಚದುರಿಸಲು ಲಾಠಿಚಾರ್ಜ್, ಅಶ್ರುವಾಯು ಸಿಡಿಸಿದ್ದರು. ಏತನ್ಮಧ್ಯೆ ಗ್ರಾಮಸ್ಥರು ಪೊಲೀಸರು ಮೇಲೆ ಏಕಾಏಕಿ ಕಲ್ಲುತೂರಾಟ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋದ ಪರಿಣಾಮ ಪೊಲೀಸರು ಗೋಲಿಬಾರ್ ನಡೆಸಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

Comments are closed.