ರಾಷ್ಟ್ರೀಯ

ವಿರಾಟ್‌ ಕೊಹ್ಲಿ ಸವಾಲನ್ನು ಸ್ವೀಕರಿಸಿದ ಪ್ರಧಾನಿ ಮೋದಿ !

Pinterest LinkedIn Tumblr

ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ‘ಹಮ್‌ ಫಿಟ್‌ ತೋ ಇಂಡಿಯಾ ಫಿಟ್‌’ ಎಂಬ ಅಭಿಯಾನದ ಅಡಿ ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ಹಾಕಿರುವ ಸವಾಲನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ವೀಕರಿಸಿದ್ದಾರೆ.

ತಾವು ಫಿಟ್‌ನೆಸ್‌ ಕಾಯ್ದುಕೊಳ್ಳಲು ಅನುಸರಿಸುವ ಗುಟ್ಟನ್ನು ವಿಡಿಯೊ ಮೂಲಕ ಆದಷ್ಟು ಬೇಗ ತಿಳಿಸುವುದಾಗಿ ಮೋದಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ವಿರಾಟ್‌ ಕೊಹ್ಲಿ ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ತಮ್ಮ ಪತ್ನಿ ಅನುಷ್ಕಾ ಶರ್ಮಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕ್ರಿಕೆಟಿಗ ಮಹೇಂದ್ರ ಸಿಂಗ್‌ ದೋನಿ ಅವರಿಗೆ ಬುಧವಾರ ಟ್ವಿಟರ್‌ನಲ್ಲಿ ಸವಾಲು ಹಾಕಿದ್ದರು.

ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ‘ಹಮ್‌ ಫಿಟ್‌ ತೋ ಇಂಡಿಯಾ ಫಿಟ್‌’ ಎಂಬ ಅಭಿಯಾನದ ಅಡಿಯಲ್ಲಿ ಎಲ್ಲ ಭಾರತೀಯರು ತಮ್ಮ ಫಿಟ್‌ನೆಸ್‌ ಮಂತ್ರದ ಬಗ್ಗೆ ವಿಡಿಯೊ ಮಾಡಿ ಹಂಚಿಕೊಳ್ಳಲು ಟ್ವಿಟರ್‌ನಲ್ಲಿ ಇತ್ತೀಚೆಗೆ ಕರೆ ನೀಡಿದ್ದರು.

Comments are closed.