ರಾಷ್ಟ್ರೀಯ

ಯೋಗಿ ಸಂಪುಟದಿಂದ ಮದರಸಾಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಂಶೋಧನಾ ಮಂಡಳಿ ಪಠ್ಯಕ್ಕೆ ಅಸ್ತು

Pinterest LinkedIn Tumblr


ಲಖನೌ: ಉತ್ತರ ಪ್ರದೇಶದ ಮದರಸಾಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಂಶೋಧನಾ ಮಂಡಳಿ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಚಯಿಸುವ ಪ್ರಸ್ತಾವನೆಗೆ ಯೋಗಿ ಆದಿತ್ಯನಾಥ್‌ ನೇತೃತ್ವದ ಸಚಿವ ಸಂಪುಟ  ಗ್ರೀನ್‌ ಸಿಗ್ನಲ್‌ ನೀಡಿದೆ.

ಹೀಗಾಗಿ ಇನ್ನು ಮುಂದೆ ಮದರಸಾಗಳಲ್ಲೂ ವಿಜ್ಙಾನ, ಗಣಿತ ಮತ್ತು ಸಮಾಜ ವಿಜ್ಞಾನ ಪಠ್ಯಗಳನ್ನು ಎನ್‌ಸಿಇಆರ್‌ಟಿ ಪಠ್ಯದಂತೆಯೇ ಬೋಧನೆ ಮಾಡಲಾಗುತ್ತದೆ. ಈ ಕ್ರಮದಿಂದ ಮದ್ರಸಾಗಳಲ್ಲಿನ ವಿದ್ಯಾರ್ಥಿಗಳಿಗೆ ಸಮಕಾಲೀನ ಶಿಕ್ಷ ಣ ದೊರೆಯುವುದಲ್ಲದೆ, ಅವರ ಕೌಶಲ್ಯ ಹೆಚ್ಚಳಕ್ಕೂ ನೆರವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮದರಸಾಗಳಲ್ಲಿ ಆಧುನಿಕ ಶಿಕ್ಷ ಣ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಆದಿತ್ಯನಾಥ್‌ ಈ ಹಿಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Comments are closed.