ರಾಷ್ಟ್ರೀಯ

ಮಾರಣಾಂತಿಕ ನಿಫಾ ಸ್ಥಳೀಯವಾಗಿ ಇರುತ್ತೆ ಹೊರತು ಸಾಂಕ್ರಾಮಿಕವಲ್ಲ; ಕೇಂದ್ರ ಸರ್ಕಾರ

Pinterest LinkedIn Tumblr

ನವದೆಹಲಿ: ಕೇರಳ ರಾಜ್ಯದಲ್ಲಿ 13 ಮಂದಿಯನ್ನು ಬಲಿ ತೆಗೆದುಕೊಂಡಿರುವ ಮಾರಣಾಂತಿಕ ನಿಫಾ ವೈರಸ್ ಸಾಂಕ್ರಾಮಿಕ ರೋಗವಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಎಎನ್ ಐ ಜತೆ ಮಾತನಾಡುತ್ತ, ನಿಫಾ ವೈರಸ್ ಕುರಿತು ಭಾರತ ಸರ್ಕಾರ ತೀವ್ರ ನಿಗಾ ಇರಿಸಿದೆ. ನಮ್ಮ ವೈದ್ಯರ ತಂಡ ಸ್ಥಳದಲ್ಲಿದ್ದು, ಎಲ್ಲಾ ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಿದರು.

ನಿಫಾ ಸ್ಥಳೀಯವಾಗಿ ಇರುತ್ತೆ ಹೊರತು ಅದು ಸಾಂಕ್ರಾಮಿಕವಲ್ಲ. ಹೀಗಾಗಿ ಎಲ್ಲಾ ರೀತಿಯಿಂದಲೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ. ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ

Comments are closed.