ರಾಷ್ಟ್ರೀಯ

ಶಾಸಕರಾಗಿ ಚುನಾಯಿತರಾದ ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ

Pinterest LinkedIn Tumblr

ಹೊಸದಿಲ್ಲಿ: ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಸಂಸತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಶ್ರೀರಾಮುಲು ಮತ್ತು ಜೆಡಿಎಸ್‌ನ ಸಿ.ಎಸ್‌.ಪುಟ್ಟರಾಜು ಅವರ ರಾಜೀನಾಮೆಯನ್ನು ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅಂಗೀಕರಿಸಿದ್ದಾರೆ.

ಶಿವಮೊಗ್ಗ ಕೇತ್ರದ ಸಂಸದರಾಗಿದ್ದ ಬಿಎಸ್‌ವೈ ಅವರು ಶಿಕಾರಿಪುರದಿಂದ, ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದ ಸಂಸದರಾಗಿದ್ದ ಶ್ರೀರಾಮುಲು ಅವರು ಮೊಳಕಾಲ್ಮೂರು ಎಸ್‌ಟಿ ಮೀಸಲು ಕ್ಷೇತ್ರದಿಂದ. ಮಂಡ್ಯ ಸಂಸದರಾಗಿದ್ದ ಪುಟ್ಟರಾಜು ಅವರು ಮೇಲುಕೋಟೆ ಕ್ಷೇತ್ರದಿಂದ ಶಾಸಕರಾಗಿ ವಿಧಾನಸಭೆಗೆ ಪ್ರವೇಶ ಪಡೆದಿದ್ದರು.

ಮೂರು ಕ್ಷೇತ್ರದಲ್ಲಿ ಉಪಚುನಾವಣೆ ಎದುರಾಗಿದ್ದು, ಸದ್ಯದಲ್ಲೇ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳಿವೆ.ರಾಜಕೀಯ ಪಕ್ಷಗಳು ಈಗಲೆ ಸಿದ್ಧತೆಗಳನ್ನು ಆರಂಭಿಸಿಕೊಂಡಿವೆ.

Comments are closed.