ರಾಷ್ಟ್ರೀಯ

14 ಕ್ಷೇತ್ರಗಳ ಚುನಾವಣೆ ಫಲಿತಾಂಶ: ಬಿಜೆಪಿಗೆ ಹಿನ್ನೆಡೆ

Pinterest LinkedIn Tumblr

ಹೊಸದಿಲ್ಲಿ: ಇತ್ತೀಚೆಗೆ ನಡೆದ ದೇಶದ 10 ವಿಧಾನಸಭಾ ಕ್ಷೇತ್ರಗಳು ಹಾಗೂ 4 ಲೋಕಸಭೆ ಕ್ಷೇತ್ರಗಳ ಚುನಾವಣೆ ಹಾಗೂ ಉಪಚುನಾವಣೆಯ ಮತ ಎಣಿಕೆ ಬಹುತೇಕ ಅಂತ್ಯಗೊಂಡಿದ್ದು, ಒಟ್ಟಾರೆ ಫಲಿತಾಂಶದಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಒಕ್ಕೂಟಕ್ಕೆ ಹಿನ್ನೆಡೆಯಾಗಿದೆ.

ಉತ್ತರ ಪ್ರದೇಶದ ಕೈರಾನಾ ಲೋಕಸಭೆ ಉಪಚುನಾವಣೆಯಲ್ಲಿ ಆರ್‌ಎಲ್‌ಡಿ ಪಕ್ಷ ಗೆಲುವು ಸಾಧಿಸಿದ್ದು, ನಾಗಾಲ್ಯಾಂಡ್‌ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಮಿತ್ರಕೂಟ ಪಕ್ಷ ಎನ್‌ಡಿಪಿಪಿ ಮುನ್ನಡೆ ಸಾಧಿಸಿದೆ. ಇನ್ನು, ಮಹಾರಾಷ್ಟ್ರದಲ್ಲಿ 2 ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಪಾಲ್ಗಾರ್‌ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ರೆ, ಭಂಡಾರಾ – ಗೋಂಡಿಯಾ ಕ್ಷೇತ್ರದಲ್ಲಿ ಎನ್‌ಸಿಪಿ ಗೆಲುವು ಸಾಧಿಸಿದೆ.

ಅಲ್ಲದೆ, 9 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆ ಹಾಗೂ 1 ಕ್ಷೇತ್ರದ ಚುನಾವಣೆ ಪೈಕಿ ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಉಳಿದ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕರ್ನಾಟಕದ ರಾಜರಾಜೇಶ್ವರಿ ನಗರ ಚುನಾವಣೆ ಹಾಗೂ ಇತರೆ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಜತೆಗೆ ಜೆಎಂಎಂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಇನ್ನು, ಆರ್‌ಜೆಡಿ, ಸಿಪಿಎಂ, ಎಸ್‌ಪಿ, ಟಿಎಂಸಿ ಪಕ್ಷಗಳು ತಲಾ 1 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿವೆ. ಒಟ್ಟಾರೆ, ಬಿಜೆಪಿ ಹೊರತುಪಡಿಸಿ ವಿರೋಧ ಪಕ್ಷಗಳೆಲ್ಲ ಒಂದಾಗಲು ಮುಂದಾಗುತ್ತಿರುವುದರಿಂದ, ಈ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಹಾಗೂ ಎನ್‌ಡಿಎ ಹರಸಾಹಸ ಪಡೆಯಬೇಕಿದೆ.

Comments are closed.