ರಾಷ್ಟ್ರೀಯ

ಮಧ್ಯಪ್ರದೇಶ: ಬಿಜೆಪಿ ವಿರುದ್ಧ ಹೋರಾಟಕ್ಕೆ ಬಿಎಸ್​ಪಿ ಜೊತೆ ಮೈತ್ರಿಗೆ ಮುಂದಾದ ಕಾಂಗ್ರೆಸ್​

Pinterest LinkedIn Tumblr


ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್​-ಆಪ್​ ಮೈತ್ರಿಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಬಿಎಸ್​ಪಿ ಜೊತೆಗೆ ಮೈತ್ರಿಗೆ ಮುಂದಾಗಿದೆ ಎನ್ನಲಾಗುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಸರ್ಕಾರವನ್ನು ಸೋಲಿಸಲು ಕಾಂಗ್ರೆಸ್​ ಟೊಂಕ ಕಟ್ಟಿ ನಿಂತಿದ್ದು, ದೇಶದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಸಖ್ಯ ಬೆಳೆಸಲು ನಿರ್ಧರಿಸಿದೆ ಎನ್ನುತ್ತಿವೆ ಮೂಲಗಳು.

ಕರ್ನಾಟಕದಲ್ಲಿ ಕಾಂಗ್ರೆಸ್​ ಜೆಡಿಎಸ್​ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಬಿಜೆಪಿಯನ್ನು ಅಧಿಕಾರದಿಂದ ದೂರ ಉಳಿಯುವಂತೆ ಮಾಡಲಾಯ್ತು. ಇದೆ ಮಾದರಿಯಲ್ಲಿ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳಲ್ಲಿ ಅಧಿಕಾರದಿಂದ ದೂರ ಉಳಿಸಲು ಚಿಂತಿಸಿರುವ ಕಾಂಗ್ರೆಸ್​ 2019ರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಪಣತೊಟ್ಟಿದೆ.

ಜೆಡಿಎಸ್ ಜೊತೆಗಿನ ಮೈತ್ರಿ ಯಶಸ್ವಿಯಾದ ಬಳಿಕ ಕಾಂಗ್ರೆಸ್​ ಮಧ್ಯಪ್ರದೇಶದಲ್ಲಿಯೂ ಬಿಎಸ್’ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಬಿಎಸ್’ಪಿ ಜೊತೆಗೆ ಮೈತ್ರಿಗೆ ಮುಂದಾಗಿರುವ ಕಾಂಗ್ರೆಸ್ ಈಗಾಗಲೇ ಅನೌಪಚಾರಿಕ ಮಾತುಕತೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಉಭಯ ಪಕ್ಷಗಳು ಮೈತ್ರಿ ಕುರಿತು ಮೊದಲನೇ ಹಂತದ ಮಾತುಕತೆ ನಡೆಸಿವೆ. ಹೀಗಾಗಿ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಎರಡು ಪಕ್ಷಗಳು ಬಹುತೇಕ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ ಎಂದು ವರದಿಗಳು ತಿಳಿಸಿವೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಬಳಿಕ ಬಿಎಸ್​ಪಿ-ಕಾಂಗ್ರೆಸ್ ಮೈತ್ರಿ ಲೋಕಸಭಾ ಚುನಾವಣೆಯಲ್ಲೂ ಮುದುಂವರೆಯಲಿದೆ ಎನ್ನುತ್ತಿವೆ ಮೂಲಗಳು. ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದ ಮಾಯಾವತಿ ಅವರು, ಇದೀಗ ಕಾಂಗ್ರೆಸ್​ ಜೊತೆಗೆ ಕೈ ಜೋಡಿಸಲು ಮುಂದಾಗಿರುವುದು ಬಿಜೆಪಿಗೆ ದೊಡ್ಡ ತಲೆ ನೋವಾಗಿ ಪರಿಣಿಮಿಸಿದೆ.

Comments are closed.