ರಾಷ್ಟ್ರೀಯ

ಶುಕ್ರವಾರದಂದು ಪೆಟ್ರೋಲ್ 21 ಪೈಸೆ, ಡೀಸೆಲ್ 15 ಪೈಸೆ ಇಳಿಕೆ

Pinterest LinkedIn Tumblr


ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 10ನೇ ಬಾರಿ ಇಳಿಕೆ ದಾಖಲಾಗಿದ್ದು, ಶುಕ್ರವಾರ ರಾಷ್ಟ್ರರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀ. 21 ಪೈಸೆ ಇಳಿಕೆಯಾಗಿದ್ದು, ಲೀ. 77.42 ರೂ. ಆಗಿದ್ದರೆ ಡೀಸೆಲ್‌ಗೆ 15 ಪೈಸೆ ಇಳಿಕೆಯಾಗಿದ್ದು, ಲೀ. 68.58 ರೂ. ಆಗಿದೆ.

ಇದರಿಂದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಲಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದು, ಕಳೆದ ಹಲವು ದಿನಗಳಿಂದ ತೈಲ ಬೆಲೆ ಇಳಿಕೆಯಾಗಿರಲಿಲ್ಲ.

ಬೆಲೆ ಏರಿಕೆಗೆ ಕಡಿವಾಣ ಹಾಕಲು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಮುಂದಾಗಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ತೈಲ ಬೆಲೆ ಪರಿಷ್ಕರಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದೆ.

ಈ ಬಗ್ಗೆ ಬುಧವಾರ ಹೇಳಿಕೆ ನೀಡಿದ್ದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಜನಸಾಮಾನ್ಯರು ತೈಲ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅದಕ್ಕೆ ಸೂಕ್ತ ರೀತಿಯ ಪರಿಹಾರ ಕಂಡುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

Comments are closed.