ರಾಷ್ಟ್ರೀಯ

ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕ್ ಮೂಲದ 6 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Pinterest LinkedIn Tumblr

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.

ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ನಲ್ಲಿ ಇಂದು ಮುಂಜಾನೆ ಪಾಕಿಸ್ತಾನ ಗಡಿಯಿಂದ ಮೂವರು ಉಗ್ರರು ಭಾರತದ ಗಡಿಯೊಳಗೆ ನುಸುಳುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನೆಯ ಸಿಬ್ಬಂದಿ ಇದನ್ನು ಗಮನಿಸಿ ಕೂಡಲೇ ಗುಂಡು ಹಾರಿಸಿದ್ದಾರೆ. ಉಗ್ರರು ಕೂಡ ಪ್ರತಿದಾಳಿ ಮಾಡಿದ್ದು, ಕೂಡಲೇ ಯೋಧರು ಸುತ್ತುವರೆದು ಗುಂಡಿನ ದಾಳಿ ಆರಂಭಿಸಿದ್ದಾರೆ.

ಯೋಧರ ಗುಂಡಿನ ದಾಳಿಯಲ್ಲಿ 6 ಉಗ್ರರು ಹತರಾಗಿದ್ದು, ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ಇದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದೆ. ಈಗಲೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ದಾಳಿ ವೇಳೆ ಸೈನಿಕರಿಗೆ ಗಾಯಗಳಾದ ಕುರಿತು ಮಾಹಿತಿ ಲಭ್ಯವಾಗಿಲ್ಲ.

Comments are closed.