ರಾಷ್ಟ್ರೀಯ

15 ವರ್ಷದ ಬಾಲಕನೊಬ್ಬನನ್ನು ಸೆಕ್ಸ್’ಗೆ ಬಳಸಿಕೊಂಡ ಆಂಟಿ ! ಬಾಲಕ ಕಿರುಕುಳದಿಂದ ಬೇಸತ್ತು ಮಾಡಿದ್ದೇನು..?

Pinterest LinkedIn Tumblr

ಹೈದರಾಬಾದ್: 45 ವರ್ಷದ ಮಹಿಳೆಯೊಬ್ಬಳು 15ರ ಬಾಲಕನನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡಿರುವ ಘಟನೆಯೊಂದು ವಿಜಯವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕನ ಮೇಲೆ ಒಂದು ತಿಂಗಳನಿಂದ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕನ ಮೇಲೆ ಮಹಿಳೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾಳೆ. ಬಾಲಕ ತನ್ನ ಮೇಲಾಗುತ್ತಿರುವ ಕಿರುಕುಳವನ್ನು ತನ್ನ ತಾಯಿಗೆ ಹೇಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿದ ಬಾಲಕನ ತಾಯಿ ನೆರೆಹೊರೆಯವರ ಸಹಾಯದಿಂದ ಮಹಿಳೆಯನ್ನು ಆಕೆಯ ಮನೆಯಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಬಾಲಕನ ತಾಯಿ ವಿಜಯವಾಡ ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದಾರೆ. ಬಾಲಕ ಕೆಲವು ದಿನಗಳ ಹಿಂದೆಯಷ್ಟೆ ಬೇಸಿಗೆ ರಜೆ ಮುಗಿಸಿಕೊಂಡು ಊರಿಗೆ ಬಂದಿದ್ದನು ಎಂದು ಬಾಲಕನ ತಾಯಿ ಹೇಳಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಒಂದು ತಿಂಗಳನಿಂದ ಮಹಿಳೆ ಬಾಲಕನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ ಎಂಬ ಆರೋಪಗಳು ಕೇಳಿ ಬಂದಿವೆ. ಇತ್ತ ಬಾಲಕ ಮತ್ತು ಮಹಿಳೆ ಇಬ್ಬರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಮಹಿಳೆಯನ್ನು ರಿಮ್ಯಾಂಡ್ ಹೋಮ್‍ನಲ್ಲಿ ಇರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Comments are closed.