ಉತ್ತರಪ್ರದೇಶ: ಆಗ್ರಾ-ಲಖನೌ ಹೆದ್ದಾರಿ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಸರ್ಕಾರಿ ಬಸ್ ಹರಿದು ಏಳು ವಿದ್ಯಾರ್ಥಿಗಳು ಮೃತಪಟ್ಟಿರುವ ಧಾರುಣ ಘಟನೆ ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ.
ಕನೌಜ್ ಜಿಲ್ಲೆಯ ಸಂತ್ ಕಬೀರ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ಆಗ್ರಾಗೆ ಪಿಕ್ನಿಕ್ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳು ಪಿಕ್ನಿಕ್ಗೆ ತೆರಳುತ್ತಿದ್ದ ಬಸ್ನಲ್ಲಿ ಡೀಸೆಲ್ ಖಾಲಿಯಾಗಿತ್ತು. ಹಾಗಾಗಿ ಅವರನ್ನು ಕೆಳಗಿಳಿಸಿದ್ದ ಚಾಲಕ ಡೀಸೆಲ್ ಹಾಕಿಸಿಕೊಳ್ಳಲು ಬಂಕ್ಗೆ ತೆರಳಿದ್ದ. ಬಸ್ಸಿಗಾಗಿ ರಸ್ತೆಬದಿ ನಿಂತು ಕಾಯುತ್ತಿದ್ದಾಗ ಹೆದ್ದಾರಿಯಲ್ಲಿ ಹಿಂಬದಿಯಿಂದ ಯಮನಂತೆ ಬಂದ ಸರ್ಕಾರಿ ಬಸ್ ವಿದ್ಯಾರ್ಥಿಗಳ ಗುಂಪಿನ ಮೇಲೆ ಹರಿದಿದೆ.
ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟರೆ, ಇನ್ನೂ ಹಲವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪಾಲಕರಿಗೂ ವಿಷಯ ತಿಳಿಸಲಾಗಿದೆ.
ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಆತ್ಮಕ್ಕೆ ಸಂತಾಪ ಸೂಚಿಸಿ, ಮೃತರಿಗೆ 2 ಲಕ್ಷ ರೂ., ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
Comments are closed.