ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರಿಗೆ ಇನ್ನಷ್ಟು ಕೆಲಸ ಮಾಡಬೇಕಿದೆ; ಮುಖ್ತಾರ್ ಅಬ್ಬಾಸ್ ನಖ್ವಿ

Pinterest LinkedIn Tumblr


ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮುಸ್ಲಿಮರ ವಿಶ್ವಾಸ ಗಳಿಸಬೇಕಾದರೆ, ಇನ್ನಷ್ಟು ಕೆಲಸ ಮಾಡಬೇಕಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಮುಸಲ್ಮಾನರ ಮನಸ್ಸು ಕಳೆದ 70 ವರ್ಷಗಳಿಂದ ಬದಲಾಗಿಲ್ಲ, ಮುಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತ್ರಿವಳಿ ತಲಾಕ್ ಸಹಿತ ಮುಸ್ಲಿಮರ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಕೈಗೊಂಡ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅವರಿಗೆ ನೆನಪಿಸಬೇಕಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು ಮತ್ತು ಮುಸ್ಲಿಂ ಮಹಿಳೆಯರು ಬಿಜೆಪಿ ಅವರಿಗಾಗಿ ಏನು ಮಾಡಿದೆ ಎನ್ನುವುದನ್ನು ಅರಿತುಕೊಳ್ಳುತ್ತಿದ್ದಾರೆ, ಅದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದು ನಖ್ವಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳೆಲ್ಲಾ ಒಟ್ಟಾಗಿ ಬಿಜೆಪಿ ವಿರುದ್ಧ ಹೋರಾಡಲಿವೆ. ಆದರೆ ಅದಕ್ಕೆ ಬಿಜೆಪಿ ಸೂಕ್ತ ಕಾರ್ಯತಂತ್ರ ರೂಪಿಸಲಿದೆ. ಕಾಂಗ್ರೆಸ್ ಎಲ್ಲ ಮುಸ್ಲಿಮರು ಕೂಡ ಅವರಿಗೇ ಮತ ನೀಡುತ್ತಾರೆ ಎಂದುಕೊಂಡಿದೆ. ಆದರೆ ಅವರಿಗಾಗಿ ಏನೂ ಮಾಡಿಲ್ಲ.

ಬಿಜೆಪಿ ಮುಸ್ಲಿಮರ ಅಭಿವೃದ್ಧಿಗಾಗಿ ಹಲವು ಯೋಜನೆ ಕೈಗೊಂಡಿದೆ. ಹೀಗಾಗಿ ಮುಸ್ಲಿಮರು ಬಿಜೆಪಿಯ ಕುರಿತು ಒಲವು ಹೊಂದಿದ್ದಾರೆ. ಬಿಜೆಪಿ ವೋಟ್‌ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ, ಆದರೆ ಕಾಂಗ್ರೆಸ್ ಮತ್ತು ವಿಪಕ್ಷಗಳು ವೋಟ್‌ ಬ್ಯಾಂಕ್ ರಾಜಕಾರಣ ಮಾಡುತ್ತವೆ ಎಂದು ಸಚಿವ ನಖ್ವಿ ಆರೋಪಿಸಿದ್ದಾರೆ.

Comments are closed.