ರಾಷ್ಟ್ರೀಯ

ಮದುವೆಗೆ ಹೋಗಿ ಬರುತ್ತಿದ್ದ ವೇಳೆ ಕೆರೆಗೆ ಬಿದ್ದ ಕಾರು: ಆರು ಮಕ್ಕಳ ದಾರುಣ ಸಾವು

Pinterest LinkedIn Tumblr

ಬಿಹಾರ: ಕೆರೆಗೆ ಕಾರು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಆರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಿಹಾರದ ಆರಾಹಿಯ ಜಿಲ್ಲೆಯಲ್ಲಿ ನಡೆದಿದೆ. ಒಂದು ಮಗವನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ನಾಲ್ಕು ಮಂದಿ ದೊಡ್ಡವರು ಪ್ರಯಾಣಿಸುತ್ತಿದ್ದರು. ಮದುವೆ ಸಮಾರಂಭ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ದಾಬ್ರಾ ಬಳಿಯಲ್ಲಿದ್ದ ಕೆರೆಗೆ ಉರುಳಿ ಬಿದ್ದಿದೆ.

ಇದರಿಂದಾಗಿ ಸ್ಥಳದಲ್ಲೇ ಆರು ಮಕ್ಕಳು ಸಾವನ್ನಪ್ಪಿದ್ದಾರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ರಸ್ತೆ ದಾಟುತ್ತಿದ್ದ ಮಗುವನ್ನು ರಕ್ಷಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.

Comments are closed.