ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ; ರಾಷ್ಟ್ರಪತಿ ಅಂಕಿತ

Pinterest LinkedIn Tumblr


ಶ್ರೀನಗರ/ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಪಿಡಿಪಿ-ಬಿಜೆಪಿ ಮೈತ್ರಿ ಮುರಿದಿದ್ದು, ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ 24 ಗಂಟೆಗಳ ಒಳಗೆ ರಾಜ್ಯಪಾಲರ ಆಡಳಿತ ಜಾರಿಮಾಡಲಾಗಿದೆ.

ರಾಜ್ಯಪಾಲ ಎನ್‌. ಎನ್‌. ವೋಹ್ರಾ ಅವರು ರಾಜ್ಯಪಾಲರ ಆಳ್ವಿಕೆಗೆಶಿಫಾರಸು ಮಾಡಿದ ಪತ್ರಕ್ಕೆ ರಾಷ್ಟ್ರಪತಿ ಕೋವಿಂದ್‌ ಅವರು ಸಹಿ ಮಾಡಿದ್ದಾರೆ.

ಮಂಗಳವಾರ ಮಧ್ಯಾಹ್ನ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ
ಕಾರ್ಯದರ್ಶಿ ರಾಮ್‌ ಮಾಧವ್‌ ಅವರು, ಬೆಂಬಲ ಹಿಂತೆಗೆದುಕೊಳ್ಳುವ ಘೋಷಣೆ ಮಾಡಿದ್ದರು. ಬಿಜೆಪಿಯ ಈ ನಿರ್ಧಾರ ಹೊರಬೀಳುತ್ತಿದ್ದಂತೆ ಮೆಹ ಬೂಬಾ ಮುಫ್ತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

Comments are closed.