ರಾಷ್ಟ್ರೀಯ

ಮಾಜಿ ಕೇಂದ್ರ ಸಚಿವ ಚಿದಂಬರಂರ ಮನೆಗೆ ನುಗ್ಗಿ ಎರಡು ಲಕ್ಷ ಮೌಲ್ಯದ ನಗದು -ಚಿನ್ನಾಭರಣ ದೋಚಿದ ಕಳ್ಳರು

Pinterest LinkedIn Tumblr

ಚೆನ್ನೈ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಮನೆಗೆ ನುಗ್ಗಿದ ಕಳ್ಳರು ಎರಡು ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ.

1.5 ಲಕ್ಷ ನಗದು, ಮತ್ತು ಒಂದು ಲಕ್ಷ ರೂ. ಮೌಲ್ಯದ ಆಭರಣಗಳು ಕೆಲ ದಿನಗಳಿಂದ ಮನೆಯಿಂದ ಕಾಣೆಯಾಗಿದೆ ಎಂದು ಹಿರಿಯ ಪೋಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಾಜಿ ಸಚಿವರ ಮನೆಯಲ್ಲಿ ಕೆಲಸ ಮಾಡುವವರ ಕೈವಾಡ ಇದರಲ್ಲಿದೆ ಎಂದು ಶಂಕೆ ವ್ಯಕ್ತವಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದು ಘಟನೆ ಕುರಿತಂತೆ ಎಫ್ಐಆರ್ ದಾಖಲಿಸಲಾಗಿದೆ, ತನಿಖೆ ನಡೆದಿದೆ ಎಂದು ಪೋಲೀಸರು ಹೇಳಿದ್ದಾರೆ.

Comments are closed.