
ನವದೆಹಲಿ: ರಾಜಸ್ತಾನದ ಅಜ್ಮೀರ್ ಬಳಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟು, 21 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಎರುವ ಆತಂಕ ಎದುರಾಗಿದೆ ಎಂದು ವರದಿಯಾಗಿದೆ.
ಅಜ್ಮೀರ್ನ ತಬಿಜಿ ಗ್ರಾಮದ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯಿಂದಾಗಿ ಬಸ್ನ ಒಂದು ಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ.
ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿ, ಭವಿಷ್ಯದಲ್ಲಿ ಇಂತಹ ಅಪಘಾತಗಳು ನಡೆಯದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
Comments are closed.