ಮನೋರಂಜನೆ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಟ್ವೀಟ್ ಟ್ಯಾಗ್ ಮಾಡಿ ಕಾಂಗ್ರೆಸ್ ಯಡವಟ್ಟು!

Pinterest LinkedIn Tumblr


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಬಿಜೆಪಿಯ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರಿಗೆ ಟ್ಯಾಗ್ ಮಾಡುವ ಬದಲು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಟ್ಯಾಗ್ ಮಾಡಿ ಯಡವಟ್ಟು ಮಾಡಿಕೊಂಡಿದೆ!

ಮಣ್ಣು ಪರೀಕ್ಷಾ ಪ್ರಯೋಗಾಲಯಗಳ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಿದ್ದಾರೆ. ಹಿಂದಿನ ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ 1141 ಮಣ್ಣು ಪರೀಕ್ಷಾ ಪ್ರಯೋಗಾಲಯಗಳಿದ್ದವು ಎಂದು ಉಲ್ಲೇಖಿಸಿ ನಟಿ ಪ್ರಿಯಾಂಕಾಚೋಪ್ರಾಗೆ ಕಾಂಗ್ರೆಸ್ ಪಕ್ಷ ಟ್ಯಾಗ್ ಮಾಡಿ ಟ್ವೀಟ್ ಮಾಡಿತ್ತು.

ತಪ್ಪಾಗಿರುವುದು ಗಮನಕ್ಕೆ ಬರುತ್ತಿದ್ದಂತೆಯೇ ಕಾಂಗ್ರೆಸ್ ತನ್ನ ಟ್ವೀಟರ್ ಖಾತೆಯಿಂದ ಡಿಲೀಟ್ ಮಾಡಿತ್ತು. ಆದರೆ ಸಾಮಾಜಿಕ ಹಾಗೂ ಅಂತರ್ಜಾಲ ತಾಣಗಳಲ್ಲಿ ಕಾಂಗ್ರೆಸ್ ಪಕ್ಷದ ಯಡವಟ್ಟು ಟೀಕೆಗೆ ಒಳಗಾಗಿದೆ.

Comments are closed.