ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮೋದಿ

Pinterest LinkedIn Tumblr

ಅಜಮ್ ಘರ್ :ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ದಿ ಪೂರಕ ವಾತವಾರಣ ಸೃಷ್ಟಿಸಿದೆ . ರಾಜ್ಯ ಬಂಡವಾಳ ಹೂಡಿಕೆ ಆಕರ್ಷಿಸುವ ಮೂಲಕ ಸಣ್ಣ ವ್ಯಾಪಾರಸ್ಥರು ಸುಲಭವಾಗಿ ವ್ಯವಹಾರ ನಡೆಸುವಂತಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಅಜಮ್ ಘರ್ ನಲ್ಲಿಂದು ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಪಶ್ಚಿಮ ಉತ್ತರಪ್ರದೇಶದಲ್ಲಿ ಕೈಗೊಂಡಿರುವ ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣಕ್ಕಾಗಿ 23 ಸಾವಿರ ಕೋಟಿ ರೂ. ವೆಚ್ಚವಾಗಲಿದ್ದು, ಎಲ್ಲಾ ನಗರಗಳು, ಪಟ್ಟಣಗಳು ಈ ಮಾರ್ಗದಲ್ಲಿ ಬರುವುದರಿಂದ ವಿಶಿಷ್ಠಿ ಅನುಭವವಾಗಲಿದೆ ಎಂದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಲೆ, ಭ್ರಷ್ಟಾಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದು, ರಾಜ್ಯಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸುವ ಮೂಲಕ ಸಣ್ಣ ವ್ಯಾಪಾರಸ್ಥರು ಸುಲಭವಾಗಿ ವ್ಯವಹಾರ ನಡೆಸುವಂತಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಲಖನೌದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿ ತಮ್ಮ ಸರ್ಕಾರದ ಯೋಜನೆಯಾಗಿದ್ದು, ಮರು ಶಿಲಾನ್ಯಾಸ ನೆರವೇರಿಸಲಾಗುತ್ತಿದೆ ಎಂದು ಟೀಕಿಸಿದರು.

Comments are closed.