ರಾಷ್ಟ್ರೀಯ

ದೇಗುಲ ಒಮ್ಮೆ ತೆರೆದರೆ, ಎಲ್ಲರೂ ಪ್ರವೇಶಿಸಬಹುದು: ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ ಬಗ್ಗೆ ಸುಪ್ರೀಂ ಪ್ರಶ್ನೆ

Pinterest LinkedIn Tumblr


ಹೊಸದಿಲ್ಲಿ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿಷೇಧ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ವಿಚಾರಣೆ ಆರಂಭವಾಗಿದೆ.

ಒಮ್ಮೆ ದೇಗುಲವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿದರೆ, ಎಲ್ಲರೂ ಪ್ರವೇಶಿಸಬಹುದಾಗಿದೆ. ಹೀಗಾಗಿ ಯಾವ ಆಧಾರದ ಮೇಲೆ ಪ್ರವೇಶ ನಿಷೇಧಿಸಲಾಗಿದೆ ಎಂದು ಸುಪ್ರೀಂ ನ್ಯಾಯಪೀಠ ಪ್ರಶ್ನಿಸಿದೆ.

ಅಕ್ಟೋಬರ್‌ 3, 2017ರಲ್ಲಿ ಈ ವಿಚಾರವನ್ನು ಸುಪ್ರೀಂ ಕೋರ್ಟ್‌ನ ಪಂಚ ಸದಸ್ಯರ ಸಾಂವಿಧಾನಿಕ ಪೀಠಕ್ಕೆ ವಿಚಾರಣೆಯನ್ನು ವರ್ಗಾಯಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾಯಮೂರ್ತಿಗಳಾದ ರೋಹಿನ್‌ಟನ್‌, ಖಾನ್ವಿಲ್ಕರ್‌, ಡಿ.ವೈ. ಚಂದ್ರಚೂಡ್‌, ಇಂದು ಮಲ್ಹೋತ್ರಾ ನೇತೃತ್ವದ ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಂಡಿದೆ.

ಯಾವ ಆಧಾರದ ಮೇಲೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರೋಧ ಎಂದು ದೀಪಕ್‌ ಮಿಶ್ರಾ ಗಮನ ಸೆಳೆದರು.

Comments are closed.