ರಾಷ್ಟ್ರೀಯ

ರಾಜಸ್ತಾನದಲ್ಲಿ ಅಕ್ರಮ ಗೋ ಸಾಗಣೆ ಆರೋಪ; ದುಷ್ಕರ್ಮಿಗಳಿಂದ ವ್ಯಕ್ತಿಯ ಹತ್ಯೆ

Pinterest LinkedIn Tumblr

ಜೈಪುರ: ಸಾಮೂಹಿಕ ಹಲ್ಲೆಗೆ ಸುಪ್ರೀಂ ಕೋರ್ಟ್ ವಿರೋಧ ವ್ಯಕ್ತಪಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಸಾಮೂಹಿಕ ಹಲ್ಲೆಯಿಂದಾಗಿ ಸಾವು ಸಂಭವಿಸಿದೆ.

ರಾಜಸ್ಥಾನದ ಆಳ್ವಾರ್ ಜಿಲ್ಲೆಯ ರಾಮಘಡ್ ನಲ್ಲಿ ಗೋ ಸಂರಕ್ಷಕರ ಸೋಗಿನಲ್ಲಿ ಕೆಲ ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ಹಲ್ಲೆ ಸಾಮೂಹಿಕ ಹಲ್ಲೆ ಮಾಡಿ ಕೊಂದು ಹಾಕಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕೊಲೆಗೀಡಾದ ವ್ಯಕ್ತಿಯನ್ನು ಅಕ್ಬರ್ ಎಂದು ಗುರುತಿಸಲಾಗಿದ್ದು. ನಿನ್ನೆ ಆಳ್ವಾರ್ ನಲ್ಲಿ ಈತ ಗೋವುಗಳನ್ನು ಅಕ್ರಮ ಸಾಗಣೆ ಮಾಡುತ್ತಿದ್ದ ಎಂದು ಆರೋಪಿಸಿ ಗೋಸಂರಕ್ಷಕರು ಎಂದು ಹೇಳಿಕೊಂಡ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಆಳ್ವಾರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗಷ್ಟೇ ದೇಶದಲ್ಲಿ ನಡೆಯುತ್ತಿರುವ ಗೋ ಸಂರಕ್ಷಕರ ಸೋಗಿನ ದುಷ್ಕರ್ಮಿಗಳು ಮತ್ತು ಮಕ್ಕಳ ಕಳ್ಳರು ಎಂದು ಶಂಕಿಸಿ ನಡೆಸಲಾಗುತ್ತಿದ್ದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆ ಸರ್ಕಾರದ ಹೊಣೆಯಾಗಿದ್ದು, ಸಾಮೂಹಿಕ ಹಲ್ಲೆ ತಡೆಯಲು ಕಾನೂನು ರಚಿಸಿ ಎಂದು ನಿರ್ದೇಶನ ನೀಡಿತ್ತು.

Comments are closed.