ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಶಾಸಕರಿಂದ ಸ್ಪರ್ಧೆ

Pinterest LinkedIn Tumblr


ಲಖನೌ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಮತ್ತು ಬಹುಜನ ಸಮಾಜವಾದಿ ಪಾರ್ಟಿ ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ರಾಜ್ಯ ಸರಕಾರದಲ್ಲಿ ಇರುವ ಪ್ರಭಾವಿ ಸಚಿವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಬಿಎಸ್‌ಪಿ ಮತ್ತು ಎಸ್‌ಪಿ ಮೈತ್ರಿ ಕುರಿತು ಮಾತುಕತೆ ನಡೆಯುತ್ತಿದ್ದು, ಅಂತಿಮ ಹಂತ ತಲುಪಿಲ್ಲವಾದರೂ, ಮೈತ್ರಿ ಸಾಧ್ಯತೆಯಿದೆ. ಹೀಗಾಗಿ ಬಿಜೆಪಿ ಅದಕ್ಕೂ ಮೊದಲೇ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಲೋಕಸಭೆಯಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿ ದೊರೆಯದಿದ್ದಲ್ಲಿ, ಅಂತಹ ಕ್ಷೇತ್ರಗಳಲ್ಲಿ ಪ್ರಸ್ತುತ ಸರಕಾರದಲ್ಲಿನ ಸಚಿವರನ್ನೇ ಬಳಸಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ.

ಗೆಲುವು ಖಚಿತ ಎನ್ನುವಂತಹ ಅಭ್ಯರ್ಥಿಗಳನ್ನು ಈಗಾಗಲೇ ಬಿಜೆಪಿ ಆಯ್ಕೆ ಮಾಡುತ್ತಿದ್ದು, ಉತ್ತರ ಪ್ರದೇಶದಲ್ಲಿ ಹೆಚ್ಚಿನ ಲೋಕಸಭಾ ಸ್ಥಾನ ಗೆಲ್ಲುವ ಗುರಿ ಹೊಂದಿದೆ.

ಸಂಪುಟದಲ್ಲಿನ ಹಿರಿಯ ಸಚಿವ ಸತೀಶ್ ಮಹಾನ, ಎಸ್‌ ಎಸ್‌ ಸಾಹಿ, ದಾರಾ ಸಿಂಗ್ ಚೌಹಾಣ್, ಎಸ್‌ ಪಿ ಎಸ್‌ ಬಾಘೆಲ್ ಮತ್ತು ಸ್ಪೀಕರ್ ಹೃದಯ್ ನರೇನ್ ದೀಕ್ಷಿತ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕೆಲ ಸಚಿವರು ಎನ್ನಲಾಗಿದೆ.

ಉಚಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರಿಂದ, ಈ ಬಾರಿ ಅಂತಹ ತಪ್ಪು ಮಾಡದೆ ಸೂಕ್ತ ಅಭ್ಯರ್ಥಿ ಆಯ್ಕೆಗೆ ಪಕ್ಷ ನಿರ್ಧರಿಸಿದೆ.

Comments are closed.