ರಾಷ್ಟ್ರೀಯ

ಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ; ಸಿದ್ದರಾಮಯ್ಯ

Pinterest LinkedIn Tumblr


ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರೆ, ಮತ್ತೊಂದೆಡೆ ರಾಹುಲ್ ಗಾಂಧಿ ನೇತೃತ್ವಕ್ಕೆ ನಮ್ಮ ಯಾವುದೇ ತಕರಾರು ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಸೋಮವಾರ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕುರಿತು ಹೇಳಿದರು.ಆಷಾಢ ಮಾಸದ ಬಳಿಕ ನಿಗಮ, ಮಂಡಳಿಗೆ ಆಯ್ಕೆ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಹುಲ್ ನಾಯಕತ್ವಕ್ಕೆ ಜೈ, ಸ್ಥಾನ ಹಂಚಿಕೆ ಮಾತುಕತೆ ನಡೆದಿಲ್ಲ;

ರಾಹುಲ್ ನೇತೃತ್ವ ಒಪ್ಪಿಕೊಳ್ಳಲು ಯಾವುದೇ ತಕರಾರು ಇಲ್ಲ ಎಂದು ಹೇಳಿರುವ ದೇವೇಗೌಡರು, ಲೋಕಸಭಾ ಚುನಾವಣೆಗಾಗಿ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ, ಅದರ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯೇ ಆಗಲ್ಲ; ಅಸ್ನೋಟಿಕರ್:

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ನಡೆಯಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರೆ, ರಾಹುಲ್ ಗಾಂಧಿ ನಾಯಕತ್ವಕ್ಕೆ ಯಾವುದೇ ವಿರೋಧ ಇಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಹುಪರಾಕ್ ಹೇಳಿದ್ದರು. ಮತ್ತೊಂದೆಡೆ ಜೆಡಿಎಸ್ ಮುಖಂಡ ಅಸ್ನೋಟಿಕರ್, ರಾಹುಲ್ ಗಾಂಧಿ ಪ್ರಧಾನಿಯೇ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Comments are closed.