ರಾಷ್ಟ್ರೀಯ

ಅಧಿಕ ಮತಕ್ಷೇತ್ರಗಳನ್ನು ಬಿಟ್ಟುಕೊಟ್ಟರೆ ಮಾತ್ರ ಕಾಂಗ್ರೆಸ್ ಜತೆ ಮೈತ್ರಿ: ಮಾಯಾವತಿ

Pinterest LinkedIn Tumblr


ಲಖನೌ: ಇತ್ತೀಚಿಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಮಹಾಮೈತ್ರಿಕೂಟದ ನಾಯಕ ಮತ್ತು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿಕೊಂಡ ಬೆನ್ನಲ್ಲೇ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಹೆಚ್ಚು ಸ್ಥಾನಗಳನ್ನು ಬಿಟ್ಟುಕೊಟ್ಟರೆ ಮಾತ್ರ ಮೈತ್ರಿಕೂಟ ಸೇರುವುದಾಗಿ ಬಿಎಸ್ಪಿ ನಾಯಕಿ ಮಾಯಾವತಿ ಅವರು ಮಂಗಳವಾರ ಹೇಳಿದ್ದಾರೆ.
ಕಳೆದ ವಾರ ಲಖನೌನಲ್ಲಿ ನಡೆದ ಬಿಎಸ್ಪಿ ಕಾರ್ಯಕರ್ತರ ಸಭೆಯಲ್ಲಿ ಮಾಯಾವತಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ಪ್ರಸ್ತಾಪವನ್ನು ಮಂಡಿಸಿತ್ತು.
ಮಹಾಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ಮೂರು ರಾಜ್ಯಗಳ(ಮಧ್ಯ ಪ್ರದೇಶ, ರಾಜಸ್ಥಾನ, ಚತ್ತೀಸ್ ಗಢ) ವಿಧಾನಸಭೆ ಚುನಾವಣೆಯಲ್ಲೂ ತಮ್ಮ ಪಕ್ಷಕ್ಕೆ ಉತ್ತಮ ಸೀಟ್ ಗಳು ಬಿಟ್ಟುಕೊಟ್ಟರೆ ಮಾತ್ರ ಕಾಂಗ್ರೆಸ್ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ, ಚತ್ತೀಸ್ ಗಢ ಹೊರತಾಗಿಯೂ ಬಿಎಸ್ಪಿ 2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎಸ್ಪಿ ಮತ್ತು ಆರ್ ಎಲ್ ಡಿ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.
ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಬಿಎಸ್ಪಿ ಮೈತ್ರಿಗೆ ಸಂಬಂಧಿಸಿದಂತೆ ಹಲವು ಕಾಂಗ್ರೆಸ್ ನಾಯಕರು ವಿಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದು, ನಮ್ಮ ಪಕ್ಷಕ್ಕೆ ಗೌರವಯುತ ಸ್ಥಾನಗಳನ್ನು ಬಿಟ್ಟುಕೊಟ್ಟರೆ ಮಾತ್ರ ಕಾಂಗ್ರೆಸ್ ಜತೆ ಮೈತ್ರಿ. ಇಲ್ಲದಿದ್ದರೆ ನಮ್ಮ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವ ಸಾಮರ್ಥ್ಯ ಹೊಂದಿದೆ ಎಂದು ಮಾಯಾವತಿ ಹೇಳಿದ್ದಾರೆ.

Comments are closed.