ರಾಷ್ಟ್ರೀಯ

ಲೋಕಪಾಲ್ ನೇಮಕ ವಿಳಂಬ ಖಂಡಿಸಿ ಅಕ್ಟೋಬರ್ 2 ರಿಂದ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

Pinterest LinkedIn Tumblr

ರಾಲೇಗನ್ ಸಿದ್ಧಿ: ಲೋಕಪಾಲ ನೇಮಕ ವಿಳಂಬ ಮಾಡಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಅಕ್ಟೋಬರ್ 2 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಭ್ರಷ್ಟಾಚಾರ ಮುಕ್ತ ರಾಷ್ಟ್ರಕ್ಕಾಗಿ ತಮ್ಮ ಅಭಿಯಾನದಲ್ಲಿ ಸೇರಬೇಕೆಂದು ಅವರು ಜನರಲ್ಲಿ ಮನವಿ ಮಾಡಿದರು.

ಮಹಾರಾಷ್ಟ್ರ ಅಹಮದ್ ನಗರ ಜಿಲ್ಲೆಯ ರಾಲೇಗನ್ ಸಿದ್ಧಿಯಲ್ಲಿ ಮಹಾತ್ಮಾ ಗಾಂಧಿ ಜಯಂತಿಯಾದ ಅಕ್ಟೋಬರ್ 2ರಿಂದ ತಾನು ಉಪವಾಸ ಪ್ರಾರಂಭಿಸುವುದಾಗಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಹಜಾರೆ ಪಿಟಿಐ ಗೆ ತಿಳಿಸಿದ್ದಾರೆ.

ಈ ಮುನ್ನ ಎನ್ ಡಿಎ ಸರ್ಕಾರ ಲೋಕಪಾಲ್ ಮಸೂದೆ ಜಾರಿ ಮಾಡುವುದಾಗಿಯೂ, ಕೇಂದ್ರದಲ್ಲಿ ಲೋಕಪಾಲರ ನೇಮಕ ಮಾಡುವುದಾಗಿಯೂ ಭರವಸೆ ನಿಡಿತ್ತು. 2014ರಲ್ಲಿ ಅಂದಿನ ರಾಷ್ಟ್ರಪತಿಗಳು ಲೋಕಪಾಲ್ ವಿಧೇಯಕಕ್ಕೆ ಸಹಿ ಹಾಕಿದ್ದರು. ಆದರೆ ಇದಿನ್ನೂ ಜಾರಿಯಾಗಿಲ್ಲ ಎಂದು ಅಣ್ಣಾ ಹಜಾರೆ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

“ಭ್ರಷ್ಟಾಚಾರವನ್ನು ತೊಡೆದು ಹಾಕಲು ಸರ್ಕಾರಕ್ಕೆ ಇಚ್ಚೆ ಇದ್ದಂತಿಲ್ಲ. ಆದ್ದರಿಂದ ಇದು ಲೋಕಪಾಲ್ ನೇಮಕ ವಿಳಂಬಕ್ಕೆ ಕಾರನಗಳನ್ನು ಹೇಳುತ್ತಾ ಬಂದಿದೆ.” ಹಜಾರೆ ಹೇಳಿದರು.

ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿರುವ ಅಣ್ಣಾ ಹಜಾರೆ 2011 ರಲ್ಲಿ 12 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಅಂದು ದೇಶಾದ್ಯಂತ ಹಜಾರೆ ಅವರ ಹೋರಾಟಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗಿತ್ತು.

Comments are closed.