ಅಗರ್ತಲಾ(ತ್ರಿಪುರಾ): ಸಮಾಜದಲ್ಲಿ ಕುಸಿಯುತ್ತಿರುವ ನೈತಿಕತೆ, ಹೆಚ್ಚಾಗುತ್ತಿರುವ ಅಶ್ಲೀಲತೆ ಹಾಗೂ ಇತರೆ ಕಾರಣಗಳಿಂದ ಮಕ್ಕಳ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ದೀಪಕ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ತ್ರಿಪುರಾದಲ್ಲಿ ನಡೆದ ವಿಚಾರ ಸಂಕಿರಣ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದಲ್ಲಿ ನೈತಿಕತೆ ಕುಸಿದಿದ್ದು, ಕುಟುಂಬ ವಾತಾವರಣ ನೆಲಕಚ್ಚಿದೆ. ಅಶ್ಲೀಲತೆ ಮತ್ತು ಇನ್ನಿತರ ಕಾರಣಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಇಂತಹ ಪ್ರಕರಣಗಳು ಹೆಚ್ಚು ದಾಖಲಾಗಿವೆ ಎಂದು ಗುಪ್ತಾ ತಿಳಿಸಿದರು.
ವಿಚಾರ ಸಂಕಿರಣದಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಕೂಡ ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ವಿವಿಧ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕಾದ ಅಗತ್ಯವಿದ್ದು, ಮಕ್ಕಳು ಅವುಗಳಿಂದ ಲಾಭ ಪಡೆಯಬಹುದಾಗಿದೆ ಎಂದು ಹೇಳಿದರು.
Comments are closed.