ರಾಷ್ಟ್ರೀಯ

ವಾಜಪೇಯಿ ದಾಖಲಾಗಿರುವ ಆಸ್ಪತ್ರೆಗೆ ರಾಹುಲ್‌ ಭೇಟಿ

Pinterest LinkedIn Tumblr

ಹೊಸದಿಲ್ಲಿ: ಮಾಜಿ ಪ್ರಧಾನಿ, ಭಾರತೀಯ ಜನತಾ ಪಕ್ಷದ ಹಿರಿಯ ನೇತಾರ ಅಟಲ್ ಬಿಹಾರಿ ವಾಜಪೇಯಿ (93) ಆರೋಗ್ಯ ಪರಿಸ್ಥಿತಿ ಇನ್ನಷ್ಟು ವಿಷಮಿಸಿದೆ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ವೈದ್ಯರು ಎರಡು ದಿನಗಳಿಂದ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಾಜಪೇಯಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದೆ ಎಂದು ವೈದ್ಯರ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಗುರುವಾರ 3.45ರ ಸುಮಾರಿಗೆ ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಅಟಲ್‌ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಕುರಿತು ವೈದ್ಯರ ಜತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಅಟಲ್‌ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಮಾಹಿತಿ ಪಡೆದುಕೊಳ್ಳಲು ಹಲವಾರು ರಾಜಕೀಯ ಮುಖಂಡರು ಹೊಸದಿಲ್ಲಿಯತ್ತ ಪಯಣ ಬೆಳೆಸಿದ್ದಾರೆ. ಈಗಾಗಲೇ ಹಲವಾರು ಮಂದಿ ರಾಜಧಾನಿಗೆ ಆಗಮಿಸಿದ್ದು, ಏಮ್ಸ್‌ ಆಸ್ಪತ್ರೆಗೂ ಭೇಟಿ ನೀಡಿದ್ದಾರೆ.

ಗಣ್ಯರ ಆಗಮನದ ಹಿನ್ನೆಲೆಯಲ್ಲಿ ಏಮ್ಸ್‌ ಆಸ್ಪತ್ರೆಯಲ್ಲಿ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಅಟಲ್‌ ಬಿಹಾರಿ ವಾಜಪೇಯಿ ಅವರ ನಿವಾಸದ ಬಳಿಯೂ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

Comments are closed.