ರಾಷ್ಟ್ರೀಯ

ತೆಲಂಗಾಣ ಬಸ್‌ ದುರಂತ: 52 ಯಾತ್ರಿಕರ ಸಾವು

Pinterest LinkedIn Tumblr


ಹೈದರಾಬಾದ್‌: ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಜಗತ್ಯಾಲ್ ಜಿಲ್ಲೆಯ ಕೊಂಡಗಟ್ಟು ಎಂಬಲ್ಲಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.

ಮೃತಪಟ್ಟವರ ನಿಖರ ಸಂಖ್ಯೆ ಇನ್ನೂ ಗೊತ್ತಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಜಗತ್ಯಾಲ್ ಡಿಪೋಗೆ ಸೇರಿದ ಬಸ್ಸು ಕೊಂಡಗಟ್ಟು ಕಡೆಗೆ ಸಾಗುತ್ತಿತ್ತು. ಬಸ್ಸಿನಲ್ಲಿ 62 ಮಂದಿ ಯಾತ್ರಿಕರಿದ್ದರು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಪಾತದಿಂದ ಶವಗಳನ್ನು ಮೇಲೆತ್ತಲಾಗುತ್ತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಬೆಟ್ಟದ ಮೇಲಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಯಾತ್ರಿಕರು ತೆರಳುತ್ತಿದ್ದ ವೇಳೆ ಈ ದುರಂತ ಘಟಿಸಿದೆ.

ಬಸ್ಸು ಪ್ರಪಾತಕ್ಕೆ ಉರುಳುವ ಮೊದಲು ನಾಲ್ಕು ಬಾರಿ ಪಲ್ಟಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ. ದುರಂತದ ಸುದ್ದಿ ತಿಳಿದು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಗತ್ಯಾಲ್ ಎಸ್‌ಪಿ ಸಿಂಧು ಶರ್ಮಾ ಮತ್ತು ಜಿಲ್ಲಾಧಿಕಾರಿ ಶರತ್‌ ಸ್ಥಳಕ್ಕೆ ಧಾವಿಸಿದ್ದಾರೆ. ಕರೀಂ ನಗರ ಜಿಲ್ಲಾ ಉಸ್ತುವಾರಿ ಸಚಿವ ಎಟಾಲಾ ರಾಜೇಂದರ್‌ ಅವರಿಗೆ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ.

Comments are closed.