ರಾಷ್ಟ್ರೀಯ

ಸುಪ್ರೀಂ ಕೋರ್ಟಿನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗಗೋಯ್ ಆಯ್ಕೆ

Pinterest LinkedIn Tumblr


ನವದೆಹಲಿ: ಭಾರತದ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿದ್ದಾರೆ.
ಮೂಲಗಳ ಪ್ರಕಾರ ಅಕ್ಟೋಬರ್ 2ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅವಧಿ ಪೂರ್ಣಗೊಳ್ಳಲ್ಲಿದ್ದು, ಅಕ್ಟೋಬರ್ 3ರಂದು ರಂಜನ್ ಗಗೋಯ್ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆ ಮೂಲಕ ಈಶಾನ್ಯ ಭಾರತದಿಂದ ಭಾರತದ ಮುಖ್ಯ ನ್ಯಾಯಮೂರ್ತಿ ಆಯ್ಕೆಯಾದ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೂ ರಂಜನ್ ಗಗೋಯ್ ಪಾತ್ರರಾಗಿದ್ದಾರೆ.
ಈಗ್ಗೆ 8 ತಿಂಗಳ ಹಿಂದೆ ಅಂದರೆ ಕಳೆದ ಜನವರಿಯಲ್ಲಿ ಇದೇ ಜಸ್ಟಿಸ್ ರಂಜನ್ ಗಗೋಯ್ ಮತ್ತು ಇತರೆ ನಾಲ್ಕು ಮಂದಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದರು. ಜಂಟಿ ಸುದ್ದಿಗೋಷ್ಠಿ ಕರೆದಿದ್ದ ನ್ಯಾಯಮೂರ್ತಿಗಳು ಇಡೀ ದೇಶದ ಗಮನ ಸೆಳೆದಿದ್ದರು. ಸುಪ್ರೀಂ ಕೋರ್ಟ್ ಇತಿಹಾಸದಲ್ಲೇ ಇಂತಹ ಘಟನೆ ಮೊದಲನೆಯದಾಗಿತ್ತು.

Comments are closed.