ರಾಷ್ಟ್ರೀಯ

ಲೈಂಗಿಕ ಕಿರುಕುಳ ಆರೋಪ: ವಿದೇಶಾಂಗ ಖಾತೆ ರಾಜ್ಯ ಸಚಿವ ಸ್ಥಾನಕ್ಕೆ ಅಕ್ಬರ್ ರಾಜೀನಾಮೆ !

Pinterest LinkedIn Tumblr

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಅಕ್ಬರ್ ಅವರು ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ.

ಆದರೆ, ಅಕ್ಬರ್ ಅವರ ರಾಜೀನಾಮೆ ಕುರಿತ ವರದಿಗಳಿಗೆ ಕೇಂದ್ರ ಸರ್ಕಾರ ಈ ವರೆಗೂ ಯಾವುದೇ ರೀತಿಯ ಅಧಿಕೃತ ಸ್ಪಷ್ಟನೆಗಳನ್ನು ನೀಡಿಲ್ಲ.

ಅಕ್ಬರ್ ಅವರು ಪತ್ರಕರ್ತರಾಗಿದ್ದಾಗ ಹಲವು ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ವಿದೇಶಾಂಗ ಖಾತೆ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಡಗಳು ಹೆಚ್ಚಾಗತೊಡಗಿತ್ತು.

ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಅಕ್ಬರ್ ಅವರು ಪ್ರಧಾನಮಂತ್ರಿಗಳಿಗೆ ಇಮೇಲ್ ಮೂಲಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪ್ರಧಾನಮಂತ್ರಿಗಳ ಕಚೇರಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿಲ್ಲ ಎಂದು ವರದಿಗಳು ತಿಳಿಸಿದ್ದವು.

ಕೆಲ ದಿನಗಳ ಹಿಂದಷ್ಟೇ ಮಹಿಳಾ ಪತ್ರಕರ್ತೆಯೊಬ್ಬರು ದಿ ಟೆಲಿಗ್ರಾಫ್ ಪತ್ರಿಕೆಯ ಸಂಪಾದಕರಾಗಿದ್ದ ಎಂ.ಜೆ.ಅಕ್ಬರ್ ಅವರು ತಮಗೆ ವೃತ್ತಿ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪ ಮಾಡಿದ್ದರು. ಇದರಂತೆ ಅಕ್ಬರ್ ವಿರುದ್ಧ 13 ಆರೋಪಗಳೂ ಕೂಡ ಕೇಳಿಬಂದಿದ್ದವು.

Comments are closed.