ಲಕ್ನೋ: ಬಿಜೆಪಿ ಪಕ್ಷದವರಿಗೆ ಚುನಾವಣೆಯನ್ನು ಎದುರಿಸಲು ನಾನು ಐಟಂ ಗರ್ಲ್ ಆಗಿಬಿಟ್ಟಿದ್ದೇನೆ. ನನ್ನನ್ನು ಮುಂದಿಟ್ಟುಕೊಂಡು ಆ ಪಕ್ಷದವರು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಲೇವಡಿ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ವಿರುದ್ಧ ಪೊಲೀಸರು ಎರಡನೇ ಬಾರಿ ಎಫ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ರೀತಿ ಪ್ರತಿಕ್ರಿಯಿಸಿರುವ ಆಜಂ ಖಾನ್, 2 ವರ್ಷದ ಹಿಂದೆ ನಾನು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೆ ಎಂದು ಈಗ ಮಾನನಷ್ಟ ಮೊಕದ್ದಮೆ ಹಾಕಿ ಎಫ್ಐಆರ್ ದಾಖಲಿಸಿದ್ದಾರೆ ಎಂದಿದ್ದಾರೆ.
ಅಂಬೇಡ್ಕರ್ ಮಹಾಸಭಾ ಪ್ರಧಾನ ಕಾರ್ಯದರ್ಶಿ ಅಮರನಾಥ ಪ್ರಜಾಪತಿ ಲಕ್ನೋದ ಹಜರತ್ಗಂಜ್ ಪೊಲೀಸ್ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಆಜಂ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 2016ರಲ್ಲಿ ಘಜಿಯಾಬಾದ್ನಲ್ಲಿ ಹಜ್ ಹೌಸ್ನ ಉದ್ಘಾಟನಾ ಸಮಾರಂಭದಲ್ಲಿ ಆಜಂ ಖಾನ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದರು ಎಂದು ಅವರು ಆರೋಪಿಸಿದ್ದರು.
ಇದಕ್ಕೂ ಮೊದಲು ಕಳೆದ ವರ್ಷ ಅಕ್ಟೋಬರ್ನಲ್ಲಿ ರಾಜ್ಯಸಭಾ ಸದಸ್ಯ ಅಮರ ಸಿಂಗ್ ತಮ್ಮ ಮಗಳ ಮೇಲೆ ಆ್ಯಸಿಡ್ ಹಾಕುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆಜಂ ಖಾನ್ ವಿರುದ್ಧ ಗೋಮ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಲೂ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು.
ನಾನು ಐಟಂ ಗರ್ಲ್ ಆಗಿಬಿಟ್ಟಿದ್ದೇನೆ:
ಬಿಜೆಪಿ ಪಕ್ಷದ ನಾಯಕರು ಪ್ರತಿ ಚುನಾವಣೆಯಲ್ಲೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳುತ್ತಾರೆ. ಅವರ ಚುನಾವಣಾ ಪ್ರಚಾರಕ್ಕೆ ನಾನು ಐಟಂ ಗರ್ಲ್ ಆಗಿಬಿಟ್ಟಿದ್ದೇನೆ. ಇನ್ನೇನು ಲೋಕಸಭಾ ಚುನಾವಣೆ ಬರುತ್ತಿರುವುದರಿಂದ ಈಗ ಮತ್ತೆ ನನ್ನ ಹೆಸರನ್ನು ಎತ್ತಿಕೊಂಡಿದ್ದಾರೆ. ನನಗೆ ಈ ಸಮನ್ಸ್, ವಾರೆಂಟ್ ತೆಗೆದುಕೊಳ್ಳುವುದೆಲ್ಲ ಅಭ್ಯಾಸವಾಗಿಬಿಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ.
Comments are closed.