ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಧಿಕೃತವಾಗಿ ಕೋರ್ಟ್ ಆದೇಶ ತರಲಿ ಎಂದು ಅಸಾದುದ್ದೀನ್ ಓವೈಸಿ ಸವಾಲ್ ಹಾಕಿದ್ದಾರೆ. ಅಲ್ಲದೇ ಬಿಜೆಪಿ ಅಮತಹ ಕೆಸಲ ಮಾಡಿತೆಂದರೆ ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಓವೈಸಿ ಕಿಡಿಕಾರಿದ್ದಾರೆ.
ಲೋಕಸಭಾ ಚುನಾವಣೆ ಸಮೀಸುತ್ತಿದ್ದಂತೆಯೇ ರಾಮಮಂದಿರ ನಿರ್ಮಾಣ ವಿಚಾರ ಮುನ್ನೆಲ್ಲೆಗೆ ಬಂದಿದೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಮಾತಾಡಿದ ಹೈದರಬಾದ್ ಮೂಲದ ಸಂಸದ, ಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಬಿಜೆಪಿಗೆ ತಾಖತ್ತಿದ್ದರೆ ಕೋರ್ಟ್ನಿಂದ ಮಂದಿರ ನಿರ್ಮಾಣಕ್ಕೆ ಆದೇಶ ತರಲಿ ಎಂದು ಸವಾಲ್ ಹಾಕಿದ್ದಾರೆ.
ಇನ್ನು 2019ರ ಜನವರಿಯ ವರೆಗೆ ಅಯೋಧ್ಯ ರಾಮ ಜನ್ಮಭೂಮಿ ಪ್ರಕರಣವನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಈ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಬಿಜೆಪಿ ನಾಯಕರ ಆದೇಶದಂತೆ ದೇಶ ನಡೆಯುವುದಿಲ್ಲ. ಭಾರತ ಇಲ್ಲಿನ ಸಂವಿಧಾನದ ಆಧಾರದ ಮೇಲೆ ನಡೆಯುತ್ತದೆ ಎಂದು ಓವೈಸಿ ಹೇಳಿದ್ದಾರೆ. ಅಲ್ಲದೇ ಬಿಜೆಪಿಗೆ ದೇಶದ ಸಂವಿಧಾನದ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ್ಧಾರೆ.
ಮೂರು ದಶಕಗಳ ಕಾಲದ ಅಯೋಧ್ಯೆ ಭೂವಿವಾದ ಪ್ರಕರಣವನ್ನು ಇಂದು ಕೂಡ ಸುಪ್ರೀಂಕೋರ್ಟ್ ಅಂತಿಮ ವಿಚಾರಣೆ ನಡೆಸಿತು. ಬಳಿಕ ಪ್ರಕರಣದ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ವಿಚಾರಣೆಗಾಗಿ ಸೂಕ್ತ ದಿನಾಂಕವನ್ನು ನಿರ್ಧರಿಸಲಿದೆ ಎಂದು ತಿಳಿಸಿದೆ.
ಈ ಹಿಂದೆ ಅಯೋಧ್ಯೆಯ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ಅಂತಿಮ ಹಂತದ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿತ್ತು. 2.77 ಎಕರೆಯ ವಿವಾದಾತ್ಮಕ ಭೂಮಿಯನ್ನು ಅಲಹಾಬಾದ್ ಹೈಕೋರ್ಟ್ನಂತೆಯೇ ಸುಪ್ರೀಂ ಕೂಡ ರಾಮ್ ಲಲ್ಲಾ ವಿರಾಜ್’ಮಾನ್, ಸುನ್ನಿ ವಕ್ಫ್’ಬೋರ್ಡ್ಗೆ ಸಮವಾಗಿ ಹಂಚಿಕೆ ಮಾಡಿ ತೀರ್ಪು ನೀಡಲಿದೆ ಎಂಬ ಚರ್ಚೆಯೂ ನಡೆಯುತ್ತಿತ್ತು.
ಈ ಮೂಲಕ ಅಲಹಬಾದ್ ಹೈಕೋರ್ಟ್ ತೀರ್ಮಾನವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಹಲವರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ತ್ರಿಸದಸ್ಯ ಪೀಠ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪನ್ನೇ ಎತ್ತಿಹಿಡಿಯಲಿದೆ ಎಂದು ಹೇಳಲಾಗಿತ್ತು
Comments are closed.