ನವದೆಹಲಿ: ರಾಮಮಂದಿರ-ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದ ನಂತರ, ರಾಮ ಮಂದಿರ ನಿರ್ಮಾಣಕ್ಕಾಗಿ ಸರಕಾರ ಭೂಮಿಯನ್ನು ಸ್ವಾಧೀನಪಡಿಸಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಹೇಳಿದೆ.
ಇದೇ ವೇಳೆ ರಾಮ ಮಂದಿರ ನಿರ್ಮಾಣದ ಬಗ್ಗೆ ಸರ್ಕಾರವು ಕಾನೂನನ್ನು ರೂಪಿಸಬೇಕು ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆರ್ಎಸ್ಎಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.ಇತ್ತೀಚಿಗೆ ಸುಪ್ರಿಂಕೋರ್ಟ್ ರಾಮಮಂದಿರ ವಿವಾದದ ವಿಚಾರಣೆಯನ್ನು ಜನವರಿಯಲ್ಲಿ ಸೂಕ್ತಪೀಠವು ನಿರ್ಧರಿಸುತ್ತದೆ ಎಂದು ತೀರ್ಪು ನೀಡಿದ ಹಿನ್ನಲೆಯಲ್ಲಿ ಈಗ ಆರೆಸೆಸ್ಸ್ ನ ಹೇಳಿಕೆ ಬಂದಿದೆ.
ರಾಮಮಂದಿರ ವಿವಾದ ವಿಚಾರವಾಗಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಕೆ.ಎಂ ಜೋಸೆಫ್ ಪೀಠವು ವಿಚಾರಣೆಯನ್ನು ಮುಂದೂಡಿತ್ತು.
ಈ ಅಯೋಧ್ಯೆ ಪ್ರಕರಣದ ವಿಚಾರಣೆ ಕುರಿತಾಗಿ ಪ್ರತಿಕ್ರಿಯಿಸಿದ ಆರೆಸೆಸ್ಸ್ ನ ಅಖಿಲ್ ಭಾರತೀಯ ಪ್ರಚಾರ ಪ್ರಮುಖ ಅರುಣ್ ಕುಮಾರ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಸಾಮರಸ್ಯದ ವಾತಾವರಣವನ್ನು ಸೃಷ್ಟಿಸುತ್ತದೆ. ಆದ್ದರಿಂದ ಸುಪ್ರೀಂ ಕೋರ್ಟ್ ಈ ವಿಷಯವನ್ನು ಶೀಘ್ರದಲ್ಲೇ ತೀರ್ಮಾನಿಸಬೇಕೆಂದು ಅದು ಒತ್ತಾಯಿಸಿದೆ.
Comments are closed.