ಚಂಡೀಗಢ: ಶಾಲೆಯಲ್ಲಿ ಸ್ಯಾನಿಟರಿ ಪ್ಯಾಡ್ ಧರಿಸಿದ ಹುಡುಗಿಯನ್ನು ಪತ್ತೆಹಚ್ಚಲು ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣ ಪಂಜಾಬಿನ ಫಾಜಿಲ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಶಾಲೆಯ ಶೌಚಾಲಯದಲ್ಲಿ ಸ್ಯಾನಿಟರಿ ಪ್ಯಾಡ್ ಎಸೆಯಲಾಗಿತ್ತು. ಇದರಿಂದ ಕೋಪಗೊಂಡ ಶಿಕ್ಷಕ ಈ ಕೆಲಸ ಮಾಡಿದವರನ್ನು ಪತ್ತೆ ಹಚ್ಚಲು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ ಎನ್ನಲಾಗಿದೆ. ‘ಯಾರು ಪ್ಯಾಡ್ ಧರಿಸಿದ್ದಾರೆ ಎಂಬುದನ್ನು ನೋಡಲು ಶಿಕ್ಷಕರು ನಮ್ಮನ್ನು ವಿವಸ್ತ್ರಗೊಳಿಸಿದ್ದರು’ ಎಂದು ಕೆಲ ವಿದ್ಯಾರ್ಥಿನಿಯರು ಅಳುತ್ತಾ ಪಾಲಕರಿಗೆ ದೂರು ನೀಡಿದ್ದಾರೆ.
ಸದ್ಯ ಈ ವಿಚಾರ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ವರೆಗೂ ಹೋಗಿದೆ. ಅವರು ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ. ‘ಎರಡು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದ್ದು, ಉಳಿದ ಶಿಕ್ಷಕರ ಮೇಲೆ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Comments are closed.