ರಾಷ್ಟ್ರೀಯ

ಮತ್ತೆ ಇಳಿಕೆಯಾದ ಪೆಟ್ರೋಲ್ ಡೀಸೆಲ್ ದರ; ಪೆಟ್ರೋಲ್ ದರದಲ್ಲಿ 21 ಪೈಸೆ, ಡೀಸೆಲ್ ದರದಲ್ಲಿ 17 ಪೈಸೆ ಇಳಿಕೆ

Pinterest LinkedIn Tumblr

ಮುಂಬೈ: ಕಳೆದ ಮೂರು ವಾರಗಳಿಂದ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆಯಾಗಿದ್ದು, ಶುಕ್ರವಾರವೂ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ಇಂದು ಪೆಟ್ರೋಲ್ ದರಲ್ಲಿ 15 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 15 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 78.06ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 72.74ಕ್ಕೆ ಇಳಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪೆಟ್ರೋಲ್ ದರದಲ್ಲಿ 15ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರ 83.57 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 16 ಪೈಸೆಯಷ್ಟು ಕಡಿಮೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 76.22ಕ್ಕೆ ಇಳಿಕೆಯಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 78.68 ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 73.125 ರೂಗೆ ಇಳಿಕೆಯಾಗಿದೆ. ಈ ಬಗ್ಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದೆ.

Comments are closed.