ರಾಷ್ಟ್ರೀಯ

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು: ಇನ್ಫೋಸಿಸ್ ನಾರಾಯಣ ಮೂರ್ತಿ

Pinterest LinkedIn Tumblr

ನವದೆಹಲಿ: ಐಟಿ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿ ಅವರು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಆಗ ಮಾತ್ರ ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಇನ್ನು ದೇಶದಲ್ಲಿ ಭ್ರಷ್ಟಾಚಾರವನ್ನು ತಗ್ಗಿಸುವಲ್ಲಿ ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಎಂದು ಮೂರ್ತಿ ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ನಾರಾಯಣ ಮೂರ್ತಿ ಅವರು, ಕೇಂದ್ರ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಕಡಿಮೆಗೊಳಿಸಲು ಪ್ರಧಾನಿ ಮೋದಿ ಮತ್ತು ಅವರ ಸಚಿವ ಸಂಪುಟ ಕಷ್ಟಪಟ್ಟು ಕೆಲಸ ಮಾಡುತ್ತಿದೆ. ಇನ್ನು ರಫೇಲ್ ಡೀಲ್ ಕುರಿತು, ಡೇಟಾ ಹೊರಬರುವ ತನಕ ಸತ್ಯ ಏನು ಎಂಬುದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಕನಿಷ್ಠ ಒಬ್ಬ ನಾಯಕನಾದರೂ ದೇಶದಲ್ಲಿ ಆರ್ಥಿಕ ಸುಧಾರಣೆಗಳನ್ನು ತರಲು ಬಯಸುತ್ತಿರುವ ನಾಯಕನಾಗಿದ್ದಕ್ಕಾಗಿ ನಾವು ಕೃತಜ್ಞರಾಗಿರಬೇಕು. ಕಳೆದ 5 ವರ್ಷಗಳಲ್ಲಿ ನೋಡುವುದಾದರೆ ದೇಶ, ಶಿಸ್ತು, ಶುಚಿತ್ವ, ಆರ್ಥಿಕ ಪ್ರಗತಿಗೆ ಒತ್ತು ನೀಡುತ್ತಿರುವ ಒಬ್ಬ ನಾಯಕ ಇರುವುದನ್ನು ನೀವು ಕಂಡಿರಬಹುದು. ಇಂತಹ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಉತ್ತಮವಾಗಿರುತ್ತೆದ ಎಂದು ಹೇಳಿದ್ದಾರೆ.

Comments are closed.