ರಾಷ್ಟ್ರೀಯ

ಇನ್ನು ಮುಂದೆ ಪಾನ್ ಕಾರ್ಡ್ ಮಾಡಿಸುವವರು ಈ ಬದಲಾವಣೆಯನ್ನು ತಿಳಿದುಕೊಳ್ಳಿ….

Pinterest LinkedIn Tumblr

ನವದೆಹಲಿ: ಪಾನ್ ಕಾರ್ಡ್ ಗಾಗಿ ಹಾಕುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವೊಂದು ಬದಲಾವಣೆಗಳನ್ನು ಮಾಡಿದೆ.

ಹೌದು ಇನ್ನು ಮುಂದೆ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವಾಗ ಅಲ್ಲಿ ತಂದೆಯ ಹೆಸರನ್ನು ತಿಳಿಸುವುದು ಕಡ್ಡಾಯವಲ್ಲ ಎಂದು ಮಂಗಳವಾರ ಆದಾಯ ತೆರಿಗೆ ಇಲಾಖೆ ತಿಳಿಸಿದೆ. ಪಾನ್ ಕಾರ್ಡ್ ಅರ್ಜಿಗಳಲ್ಲಿ, ತಾಯಿಯು ಸಿಂಗಲ್ ಪೇರೆಂಟ್ ಆಗಿದ್ದಾರೆಯೇ ಎಂದು ಅರ್ಜಿದಾರರಲ್ಲಿ ಕೇಳಲಾಗುವುದು. ಹೌದಾದಲ್ಲಿ ಅರ್ಜಿದಾರರು ಕೇವಲ ತನ್ನ ತಾಯಿಯ ಹೆಸರನ್ನು ತಿಳಿಸಿದರೆ ಸಾಕು ಎಂದು ಆದಾಯ ತೆರಿಗೆ ನಿಯಮಗಳಿಗೆ ತಿದ್ದುಪಡಿಯನ್ನು ಮಾಡಲಾದ ಅಧಿಸೂಚನೆಯಲ್ಲಿ ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ.

ಸದ್ಯ ಖಾಯಂ ಖಾತೆ ಸಂಖ್ಯೆ (ಪಾನ್) ಕಾರ್ಡ್ ನೀಡಲು ತಂದೆಯ ಹೆಸರನ್ನು ನೀಡುವುದು ಕಡ್ಡಾಯವಾಗಿದೆ. ತಿದ್ದುಪಡಿ ಮಾಡಲ್ಪಟ್ಟ ಹೊಸ ನಿಯಮವು ಡಿಸೆಂಬರ್ 5ರಿಂದ ಜಾರಿಗೆ ಬರಲಿದೆ. ಕೇವಲ ತಾಯಿಯಿಂದ ಪೋಷಿಸಲ್ಪಟ್ಟವರು ತಮ್ಮ ಅರ್ಜಿಯಲ್ಲಿ ತಂದೆಯ ಬದಲು ತಾಯಿಯ ಹೆಸರನ್ನು ಬರೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಹೊಸ ನಿಯಮದಲ್ಲಿ, ವಾರ್ಷಿಕ 2.5 ಲಕ್ಷ ರೂ. ಅಥವಾ ಅದಕ್ಕಿಂತ ಮೇಲ್ಪಟ್ಟು ಆರ್ಥಿಕ ವ್ಯವಹಾರ ನಡೆಸಿರುವ ಸಂಸ್ಥೆಗಳು ಪಾನ್ ಕಾರ್ಡ್‌ಪಡೆದುಕೊಳ್ಳುವುದು ಕಡ್ಡಾಯ ಮಾಡಲಾಗಿದೆ.

Comments are closed.