ರಾಷ್ಟ್ರೀಯ

ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ 48 ಗಂಟೆಯೊಳಗೆ ತಮ್ಮ ಸ್ಥಾನದಿಂದ ಕೆಳಗಿಳಿಯಲಿ: ಕಾಂಗ್ರೆಸ್ ಗಡುವು

Pinterest LinkedIn Tumblr

ಪಣಜಿ: ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕೂಡಲೇ ಸಿಎಂ ಸ್ಥಾನದಿಂದ 48 ಗಂಟೆಗಳೊಳಗೆ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಮಂಗಳವಾರ ಸಂಜೆ ಗೋವಾದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ತೀವ್ರ ಅನಾರೋಗ್ಯದ ಹೊರತಾಗಿಯೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿರುವ ಮನೋಹರ ಪಾರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ನೂರಾರು ಮಂದಿ ಮುಖ್ಯಮಂತ್ರಿಗಳ ಖಾಸಗಿ ನಿವಾಸಕ್ಕೆ ಪಾದಯಾತ್ರೆ ನಡೆಸಿದರು. ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಅವರ ಸ್ಥಾನದಲ್ಲಿ ಪೂರ್ಣಾವಧಿ ಮುಖ್ಯಮಂತ್ರಿ ಬೇಕು ಎಂದು ಆಗ್ರಹಿಸಿದ್ದಾರೆ.

‘ಆಡಳಿತದ ಪುನಃ ಪ್ರತಿಷ್ಠಾಪನೆಗಾಗಿ ಜನರ ಪಾದಯಾತ್ರೆ’ ಎಂಬ ಘೋಷವಾಕ್ಯದೊಂದಿಗೆ ಸುಮಾರು ಒಂದು ಕಿಲೋಮೀಟರ್ ಪಾದಯಾತ್ರೆ ನಡೆಸಿ, ಪರಿಕ್ಕರ್ ರಾಜೀನಾಮೆಗೆ 48 ಗಂಟೆಗಳ ಗಡುವು ನೀಡಲಾಗಿದೆ. ಈ ಪಾದಯಾತ್ರೆಗೆ ಕಾಂಗ್ರೆಸ್ ಹೊರತುಪಡಿಸಿ, ಎನ್‌ಸಿಪಿ ಹಾಗೂ ಶಿವಸೇನೆ ಕೂಡಾ ಬೆಂಬಲ ಸೂಚಿಸಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಪಾದಯಾತ್ರೆ ಆಯೋಜಿಸಿದ್ದವು.

ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಒಂಬತ್ತು ತಿಂಗಳಿಂದ ಪರಿಕ್ಕರ್ ಅಸ್ವಸ್ಥರಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಡೀ ರಾಜ್ಯದ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ಹೇಳಿದರು.

Comments are closed.