ರಾಷ್ಟ್ರೀಯ

ಕೇರಳ ಸರ್ಕಾರದ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಮಾಡಿದ್ದ ಪ್ರಧಾನ ಅರ್ಚಕ ಅಮಾನತು

Pinterest LinkedIn Tumblr

ಕಾಸರಗೋಡು: ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಹೇಳಿಕೆ ನೀಡಿದ್ದ ಕೇರಳ ಸರ್ಕಾರದ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಮಾಡಿದ್ದ ಕೇರಳದ ದೇವಸ್ಥಾನದ ಅರ್ಚಕನನ್ನು ಅಮಾನತು ಮಾಡಲಾಗಿದೆ.

ಎಲ್ಲ ವಯೋಮಾನದ ಮಹಿಳೆಯರೂ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿಯ ದರ್ಶನ ಮಾಡಬಹುದು ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಆದರೆ, ಇದಕ್ಕೆ ಸಂಪ್ರದಾಯವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂಕೋರ್ಟ್​ನ ತೀರ್ಪನ್ನು ಜಾರಿಗೆ ತರಲು ಮುಂದಾಗಿದ್ದ ಕೇರಳ ಸರ್ಕಾರದ ವಿರುದ್ಧವೂ ಅನೇಕರು ಪ್ರತಿಭಟನೆ ನಡೆಸಿದ್ದರು.

ಶಬರಿಮಲೆ ಪ್ರವೇಶ ವಿವಾದಕ್ಕೆ ಸಂಬಂಧಿಸಿದಂತೆ ಕೇರಳದ ಸರ್ಕಾರದ ಮುಜರಾಯಿ ಇಲಾಖೆ ಸಚಿವ ಕಡಕಂಪಳ್ಳಿ ಸುರೇಂದ್ರನ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದ ದೇವಸ್ಥಾನದ ಮುಖ್ಯ ಅರ್ಚಕ ಟಿ. ಮಾಧವನ್ ನಂಬೂದಿರಿ ಅವರ ವಿರುದ್ಧ ಕ್ರಮ ಕೈಗೊಂಡು ಕೆಲಸದಿಂದ ವಜಾಗೊಳಿಸಲಾಗಿದೆ.

ಮಲಬಾರ್​ ದೇವಸ್ವಂ ಮಂಡಳಿಯ ಅಧೀನಕ್ಕೆ ಬರುವ ಈ ದೇವಸ್ಥಾನದ ಅರ್ಚಕನ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವುದೆಂದು ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಸುಪ್ರೀಂಕೋರ್ಟ್​ ಈ ಬಗ್ಗೆ ಮರುಪರಿಶೀಲನಾ ಅರ್ಜಿಯನ್ನು ಜನವರಿಗೆ ಮುಂದೂಡಿದ ನಂತರ ಕೇರಳದಲ್ಲಿ ಗಲಭೆ ಇನ್ನೂ ಹೆಚ್ಚಾಗಿದ್ದು, ಪೊಲೀಸ್​ ಬಿಗಿ ಬಂದೋಬಸ್ತ್​ನಲ್ಲಿಯೇ ಅಯ್ಯಪ್ಪಸ್ವಾಮಿ ಪೂಜೆ ಮಾಡುವಂತಹ ಪರಿಸ್ಥಿತಿ ಎದುರಾಗಿದೆ.

Comments are closed.