ನವದೆಹಲಿ: ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 2019 ರ ಮಾರ್ಚ್ ಒಳಗಾಗಿ ದೇಶದ 543 ಲೋಕಸಭಾ ಕ್ಷೇತ್ರದಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ಸ್ಥಾಪಿಸಲು ಯೋಜನೆ ಸಿದ್ಧಪಡಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ವಿದೇಶಾಂಗ ರಾಜ್ಯ ಸಚಿವ ವಿ.ಕೆ. ಸಿಂಗ್, ಪಾಸ್ಪೋರ್ಟ್ ಗಾಗಿ ಆಗ್ರಹಿಸಿ ಹೆಚ್ಚು ಹೆಚ್ಚು ಅರ್ಜಿಗಳು ಬರುತ್ತಿದ್ದು, ಜಿಲ್ಲಾ ಕೇಂದ್ರಗಳಲ್ಲಿರುವ ಪಾಸ್ಪೋರ್ಟ್ ಗಾಗಿ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಯಿಂದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ದೇಶದ ಮತ್ತು ವಿದೇಶದಲ್ಲಿರುವ ಭಾರತೀಯ ನಾಗರಿಕರು ಸುಲಭವಾಗಿ ಪಾಸ್ಪೋರ್ಟ್ ಗೆ ಅರ್ಜಿ ಸಲ್ಲಿಸಲು ಮತ್ತು ತಮ್ಮ ಪಾಸ್ಪೋರ್ಟ್ ನ್ನು ಶೀಘ್ರದಲ್ಲಿ ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದು ಸಿಂಗ್ ಹೇಳಿದ್ದಾರೆ.
Comments are closed.