ರಾಷ್ಟ್ರೀಯ

ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯಾಗಲು ಬಿಡುವುದಿಲ್ಲ: ಪಿಣರಾಯ್ ವಿಜಯನ್

Pinterest LinkedIn Tumblr


ತಿರುವನಂತಪುರಂ: ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಲು ಬಿಡುವುದಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ.

ಬುಧವಾರದಿಂದ ಕೇರಳದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ, ಸದನದಲ್ಲೇ ಪ್ರತಿಭಟನೆ ನಡೆಸಿದ್ದರು.

ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಸಿಎಂ ಪಿಣರಾಯ್, ಶಬರಿಮಲೆಯಲ್ಲಿ ಜಾರಿಮಾಡಲಾಗಿರುವ ನಿಷೇಧಾಜ್ಞೆಯನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸುವುದಿಲ್ಲ. ನಾವು ಸುಪ್ರೀಂ ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕಾಗಿದೆ. ಶಬರಿಮಲೆಯಲ್ಲಿ ಜಾರಿಯಲ್ಲಿರುವ ಆದೇಶದ ಬಗ್ಗೆ ಹೈ ಕೋರ್ಟ್ ಕೂಡ ಸಮ್ಮತಿ ಸೂಚಿಸಿದೆ. ಹೀಗಾಗಿ ನಿಷೇಧಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಬೆಂಬಲದೊಂದಿಗೆ ಸಂಘ ಪರಿವಾರದವರು ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ. ಹೀಗಾಗಿ ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಿ ಮಾಡಲು ಬಿಡುವುದಿಲ್ಲವೆಂದು ಖಡಕ್ ಆಗಿ ಉತ್ತರಿಸಿದ್ದಾರೆ.

Comments are closed.