ರಾಷ್ಟ್ರೀಯ

ತೆಲಂಗಾಣ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಟಿಆರ್ ಎಸ್ ಪಕ್ಷದ ಅಭ್ಯರ್ಥಿಗಳ ಪ್ರಚಾರದ ತಂತ್ರ ನೋಡಿ…

Pinterest LinkedIn Tumblr

ಹೈದ್ರಾಬಾದ್ : ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡ ಭಿನ್ನ, ವಿಭಿನ್ನತೆಯಿಂದ ಗಮನ ಸೆಳೆಯುತ್ತಿದೆ.ಮತದಾರರ ಮನವೊಲಿಸಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತಿನಲ್ಲಿ ತೊಡಗಿದ್ದಾರೆ. ಅದರಲ್ಲೂ ಟಿಆರ್ ಎಸ್ ಪಕ್ಷದ ಕೆಲ ಅಭ್ಯರ್ಥಿಗಳ ಪ್ರಚಾರದ ವೈಖರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಏನೂ ಅರಿಯದ ಮುಗ್ದ ಮಕ್ಕಳು ವೋಟ್ ಹಾಕುವ ಅರ್ಹತೆ ಪಡೆಯದಿದ್ದರೂ ಅವರನ್ನೂ ಸಹ ಚುನಾವಣಾ ಪ್ರಚಾರಕ್ಕೆ ಅಭ್ಯರ್ಥಿಗಳು ಬಳಸಿಕೊಳ್ಳುವ ಮೂಲಕ ತಮ್ಮ ವರ್ಚಸ್ಸು ವೃದ್ಧಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ತೆಲಂಗಾಣ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರದ ವೇಳೆಯಲ್ಲಿ ಮಗುವಿನ ಹಿಂಬಾಗವನ್ನು ಶುಚಿಗೊಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಸಾತಿಪಲ್ಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಲಿ ಶಾಸಕ ಪೈಡಾಮರ್ತಿ ರವಿ ತನ್ನ ಸುತ್ತಲೂ ನೆರೆದಿದ್ದ ಪಕ್ಷದ ಕಾರ್ಯಕರ್ತರೊಂದಿಗೆ ಈ ರೀತಿಯ ಸಮಾಜ ಸೇವೆ ಮಾಡುವ ನೆಪದಲ್ಲಿ ಕ್ಯಾಮರಾಕ್ಕೆ ಪೋಸ್ ನೀಡಿದ್ದಾರೆ.

ಮಗು ಆಳುತ್ತಿದ್ದರೂ ಬಿಡದ ಟಿಆರ್ ಎಸ್ ಕಾರ್ಯಕರ್ತರು, ಜೈ ತೆಲಂಗಾಣ, ಕಾರಿನ ಗುರುತಿಗೆ ಮತ ಹಾಕಿ ಎಂಬಿತ್ಯಾದಿ ಘೋಷಣೆಗಳನ್ನು ಮೊಳಗಿಸುತ್ತಾ ಕ್ಯಾಮರಾಕ್ಕೆ ಪೋಸ್ ನೀಡಿದ್ದಾರೆ. ಮಗುವಿನ ತಾಯಿ ಮಗುವನ್ನು ಹಿಡಿದುಕೊಂಡಿದ್ದಾರೆ. ಪೈಡಾಮೂರ್ತಿ ರವಿ ಮಗುವನ್ನು ಸ್ವಚ್ಛಗೊಳಿಸಿದ್ದಾರೆ.

ಇಂತಹ ಅನೇಕ ಚಟುವಟಿಕೆಗಳನ್ನು ಮಾಡುವ ಮೂಲಕ ತೆಲಂಗಾಣ ರಾಷ್ಟ್ರೀಯ ಪಕ್ಷದ ನಾಯಕರು ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಇಂತಹ ಅನೇಕ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸ್ಪೀಕರ್ ಮಧುಸೂಧನಾ ಚಾರಿ ಅವು ಮತದಾರರ ಕಾಲಿಗೆ ಬೀಳುವುದು, ಮತದಾರರಿಗೆ ಸೇವ್ ಮಾಡುವ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಡಿಸೆಂಬರ್ 7 ರಂದು ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.

Comments are closed.