ರಾಷ್ಟ್ರೀಯ

ಪಾಕಿಗೆ ಹೋಗಿದ್ದು ರಾಹುಲ್ ಆದೇಶದಿಂದಲ್ಲ, ಇಮ್ರಾನ್ ಖಾನ್ ಆಹ್ವಾನದ ಮೇರೆಗೆ: ಯೂಟರ್ನ್ ಹೊಡೆದ ಸಿಧು

Pinterest LinkedIn Tumblr

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಸೂಚನೆ ಮೇಲೆ ಪಾಕಿಸ್ತಾನಕ್ಕೆ ಹೋಗಿದ್ದೆ ಎಂದು ಹೇಳಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು ಇದೀಗ ಯೂಟರ್ನ್ ಹೊಡೆದಿದ್ದು, ರಾಹುಲ್ ಆದೇಶದಿಂದಲ್ಲ, ಇಮ್ರಾನ್ ಖಾನ್ ಆಹ್ವಾನದ ಮೇರೆಗೆ ಪಾಕಿಸ್ತಾನಕ್ಕೆ ಹೋಗಿದ್ದೆ ಎಂದು ಶನಿವಾರ ಹೇಳಿದ್ದಾರೆ.

ಹೇಳಿಕೆ ತಿರುಚುವುದಕ್ಕೂ ಮುನ್ನ ಸತ್ಯವನ್ನು ತಿಳಿದುಕೊಳ್ಳಿ. ಪಾಕಿಸ್ತಾನಕ್ಕೆ ಹೋಗಿ ಎಂದು ರಾಹುಲ್ ಅವರು ಎಂದಿಗೂ ನನಗೆ ಹೇಳಿಲ್ಲ. ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರ ವೈಯಕ್ತಿಕ ಆಹ್ವಾನ ಮೇರೆಗೆ ನಾನು ಪಾಕಿಸ್ತಾನಕ್ಕೆ ತೆರಳಿದ್ದೆ ಎಂಬುದು ಇಡೀ ವಿಶ್ವಕ್ಕೆ ಗೊತ್ತಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ನ.28 ರಂದು ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಶಂಕುಸ್ಥಾಪನೆ ಮಾಡುವ ಸಲುವಾಗಿ ಸಿಧು ಅವರು ಪಾಕಿಸ್ತಾನಕ್ಕೆ ತೆರಳಿದ್ದರು. ಇದಕ್ಕೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರೇ ಆಕ್ಷೇಪ ವ್ಯಕ್ತಪಡಿಸಿದ್ದರು.

Comments are closed.