ರಾಷ್ಟ್ರೀಯ

ಗೋಹತ್ಯೆ ವದಂತಿ: ಪೊಲೀಸ್​​ ಠಾಣಾಧಿಕಾರಿಯನ್ನೇ ಕೊಂದ ಪ್ರತಿಭಟನಾಕಾರರು

Pinterest LinkedIn Tumblr


ನವದೆಹಲಿ: ಉತ್ತರಪ್ರದೇಶದಲ್ಲಿ ತಾರಕಕ್ಕೇರಿದ್ದ ಪ್ರತಿಭಟನೆಯೊಂದು ಹಿಂಸಾಚಾರಕ್ಕೆ ತಿರುಗಿ ಪೊಲೀಸ್​​ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಬುಲಂದರ್‌ಶೆಹರ್‌ ಎಂಬ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮತ್ತೋರ್ವ ಯುವಕ ಕೂಡ ಪೊಲೀಸ್​ ಗುಂಡೇಟಿಗೆ ಬಲಿಯಾಗಿದ್ದಾನೆ. ಇದೀಗ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್​​ ಇಲಾಖೆ ತಿಳಿಸಿದೆ.

ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಇಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೇ ಮಾತಿನ ಚಕಾಮಕಿ ನಡೆದಿದೆ. ಆಕ್ರೋಶಗೊಂಡ ಪ್ರತಿಭಟನಕಾರರು ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಪೊಲೀಸರ ಮೇಲೆಯೂ ದಾಳಿ ನಡೆಸಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಗಲಭೆಯಲ್ಲಿ ಪ್ರತಿಭಟನಾನಿರತರ ಆಕ್ರೋಶ ಇನ್ಸ್‌ಪೆಕ್ಟರ್ ಸುಭೋದ್ ಕುಮಾರ್ ಸಿಂಗ್ ಎನ್ನುವವರು ಬಲಿ ತಗೆದುಕೊಂಡಿದೆ ಎನ್ನುತ್ತಿವೆ ಮೂಲಗಳು.

ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿಯೇ ಬುಲಂದರ್‌ಶೆಹರ್‌ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೀರತ್​​ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ​​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಅಲ್ಲದೇ ಹೆಚ್ಚಿನ ಭದ್ರತೆ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹೈಕೋರ್ಟ್​ ಆದೇಶ: ಇನ್ನು ಅಕ್ರಮ ಗೋವುಗಳ ಸಾಗಾಟ, ಅಕ್ರಮ ಕಸಾಯಿ ಖಾನೆಗಳು, ಗೋ ವಧೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದೆ. ಅಲ್ಲದೇ ಈ ಸಂಬಂಧ ದಾಖಲಿಸಿಕೊಂಡಿರುವ ಪ್ರಕರಣಗಳು ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ವರದಿ ನೀಡುವಂತೆ ಲಕ್ನೋ ನಗರ ಪೊಲೀಸ್‌ ಆಯುಕ್ತರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಅಕ್ರಮ ಗೋ ಸಾಗಾಟ ಹಾಗೂ ಗೋ ವಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಆದೇಶ ನೀಡಲಾಗಿದೆ. ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಉಸ್ತುವಾರಿ ಸಮಿತಿಯೊಂದನ್ನು ರಚಿಸಲಾಗಿದೆ. ನಗರದಲ್ಲಿ ಎಷ್ಟು ಅಕ್ರಮ ಕಸಾಯಿಖಾನೆಗಳನ್ನು ಪತ್ತೆಹಚ್ಚಿದೆ. ಏನೆಲ್ಲ ಕ್ರಮಗಳನ್ನು ಜರುಗಿಸಿದೆ. ಎಂಬುದರ ಬಗ್ಗೆ ಕೂಡಲೇ ಸಮಗ್ರ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್​​ ನ್ಯಾಯಪೀಠ ಈ ಹಿಂದೆಯೇ ಸೂಚಿಸಿದೆ ಎನ್ನುತ್ತಾರೆ ವಕೀಲರೊಬ್ಬರು.

ಕಾಶ್ಮೀರದಲ್ಲಿ ಅಕ್ರಮ ಗೋವು ಸಾಗಣೆ: ಇತ್ತ ಜಮ್ಮು-ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಗುಂಪೊಂದು 8 ಗೋವುಗಳನ್ನು ಅಕ್ರಮ ಸಾಗಣೆ ಮಾಡುತ್ತಿತ್ತು ಎನ್ನಲಾಗಿದೆ. ಈ ವೇಳೆ ಗೋರಕ್ಷಕರ ಗುಂಪು ಗೋ ಸಾಗಿಸುತ್ತಿದ್ದ ಟ್ರಕ್​​ ಮೇಲೆ ದಾಳಿ ನಡೆಸಿದೆ. ಗೋವುಗಳನ್ನು ರಕ್ಷಿಸಮು ಮುಂದಾದ ಕೂಡಲೇ ಟ್ರಕ್​​ ಚಾಲಕ ಮತ್ತು ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.