ರಾಷ್ಟ್ರೀಯ

ಮಧ್ಯಪ್ರದೇಶ ಚುನಾವಣಾ ಫಲಿತಾಂಶ; ಕಾಂಗ್ರೆಸ್ – ಬಿಜೆಪಿ ನಡುವೆ ತೀವ್ರ ಪೈಪೋಟಿ

Pinterest LinkedIn Tumblr

ದೇಶದ ಹೃದಯ ಭಾಗ ಎನಿಸಿಕೊಂಡಿರುವ ಮಧ್ಯಪ್ರದೇಶ ಚುನಾವಣೆ ಫಲಿತಾಂಶ ಕುತೂಹಲ ಮೂಡಿಸಿದೆ. ಆಡಳಿತಾರೂಢ ಬಿಜೆಪಿ – ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಇದೆ. ಪಕ್ಷೇತರರು ನಿರ್ಣಾಯಕವಾಗುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಆದರೆ, ಕಳೆದ 13 ವರ್ಷಗಳಿಂದ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್‌ ಸಿಂಗ್ ಚೌಹಾಣ್‌ ಮತ್ತೆ ಸಿಎಂ ಆಗುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್‌ ಕೂಡ ಈ ಬಾರಿ ಅಧಿಕಾರ ನಮ್ಮದೇ ಎನ್ನುತ್ತಿದೆ. ಹೀಗಾಗಿ ಇಂದಿನ ಭವಿಷ್ಯದ ಮೇಲೆ ಮಧ್ಯಪ್ರದೇಶ ರಾಜ್ಯದ ನಾಯಕರು, ದೇಶದ ನಾಯಕರು ಹಾಗೂ ಇಡೀ ದೇಶದ ಜನತೆಯೇ ಕಣ್ಣಿಟ್ಟಿದೆ.

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್‌ ಬುಧ್ನಿ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ – ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಸದ್ಯ ಬಿಜೆಪಿ 111 ಹಾಗೂ ಕಾಂಗ್ರೆಸ್ 107 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇನ್ನು, ಬಿಎಸ್‌ಪಿ 3 ಕ್ಷೇತ್ರಗಳಲ್ಲಿ ಹಾಗೂ ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ ಶೇಕಡಾವಾರು 47.1 ಮತ ಪಡೆದುಕೊಂಡಿದ್ದರೆ, ಕಾಂಗ್ರೆಸ್ ಶೇಕಡಾವಾರು 43.3 ಮತ ಪಡೆದುಕೊಂಡಿದೆ. ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲೂ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದೆ.

Comments are closed.